ಭಜರಂಗದಳ ಮುಖಂಡರ ಮೇಲೆ ಹಲ್ಲೆ ಪ್ರಕರಣ, ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಅ.20- ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ಯುವಕರ ಗುಂಪು ಮಾರಣಾಂತಿಕ ಹಲ್ಲೇ  ನಡೆಸಿದ್ದು, ನಗರ ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ ಘಟನೆಯಲ್ಲಿ ಇನ್ನು ಹಲವರು ಭಾಗಿಯಾಗಿದ್ದಾರೆಂದು ಹೇಳಲಾಗಿದೆ.

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭೀಮಸಂದ್ರದ ಕಡೆಯಿಂದ ಬಜರಂಗದಳದ ಮಂಜು ಭಾರ್ಗವ್‍ಅವರು ಕಾರಿನಲ್ಲಿ ತುಮಕೂರು ಕಡೆ ಬರುತ್ತಿದ್ದಾಗ ಗುಬ್ಬಿ ಗೇಟ್ ಬಳಿ ಬೈಕ್‍ನಲ್ಲಿ ಹಿಂಬಾಲಿಸಿಕೊಂಡು
ಬಂದ ಯುವಕರು ವ್ಹಿಲೀಂಗ್ ಮಾಡಲು ಅವಕಾಶ ನೀಡಲಿಲ್ಲ ಎಂದು ಕಾರನ್ನು ಅಡ್ಡಗಟ್ಟಿ ರಾಡ್ ನಿಂದ ಹಲ್ಲೇ ನಡೆಸಿದ್ದಾರೆ.

ಮಂಜು ಭಾರ್ಗವ್ ಅವರನ್ನು ರಕ್ಷಿಸಲು ಬಂದ ಕಿರಣ್ ಎಂಬಾತನನ್ನು ನೆಲಕ್ಕೆ ಕೆಡವಿ ಮನಸೋಇಚ್ಛೆ ಥಳಿಸಿದ್ದಾ. ಸಾರ್ವಜನಿಕರು ಬಂದು ಜಗಳ ಬಿಡಿಸಿ ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆ ಬಳಿ ನೂರಾರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸೇರಿದ್ದರಿಂದ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂದ ತಿಲಕ್‍ಪಾರ್ಕ್ ಠಾಣೆ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವೇಳೆ ಹಿಂದೂ ಜÁಗರಣ ವೇದಿಕೆ ಪ್ರಾಂತ ಕಾರ್ಯದರ್ಶಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ವ್ಹೀಲಿಂಗ್ ಮಾಡಲು ಅವಕಾಶ ನೀಡಲಿಲ್ಲ ಎಂದು ಹಿಂಬಾಲಿಸಿಕೊಂಡು ಬಂದು ದುರುದ್ದೇಶದಿಂದಲೇ ಈ ಕೃತ್ಯ ಮಾಡಿದ್ದಾರೆ. ಹಲ್ಲೇ ನಡೆಸಿದ ಆರೋಪಿಗಳನ್ನು 24 ಗಂಟೆ ಒಳಗೆ ಪೊಲೀಸರು ಬಂಸಬೇಕು ಎಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಯುತ್ತಿದ್ದು, ಮಂಜು ಅವರು ಗೋ ಹತ್ಯೆ ವಿರುದ್ಧ ಹೋರಾಟ ನಡೆಸಿದ್ದರು. ಇದನ್ನು ಗಮನದಲ್ಲಿ ಇಟ್ಟುಕೊಂಡು ಈ ಕೃತ್ಯ ವೆಸಗಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಜ್ಯೋತಿಗಣೇಶ್, ಮಾಜಿ ಶಾಸಕ ಸೊಗಡು ಶಿವಣ್ಣ ಅವರು ಶೀಘ್ರ ಆರೋಪಿಗಳನ್ನು ಬಂಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಎಸ್‍ಪಿ ರಾಹುಲ್‍ಕುಮಾರ್ ಶಹಾಪೂರವಾಡ್, ಡಿವೈಎಸ್‍ಪಿ ಶ್ರೀನಿವಾಸ್ ಅವರೂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ತುಮಕೂರಿಗೆ ಆಗಮಿಸಿದ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಹಲ್ಲೇ ನಡೆಸಿದ ಆರೋಪಿಗಳ ಸುಳಿವು ಸಿಕ್ಕಿದ್ದು, ನೈಜ ಆರೋಪಿಗಳನ್ನು ಪೊಲೀಸರು ಶೀಘ್ರವೇ ಬಂಸಲಿದ್ದು, ಸಮಾಜದಲ್ಲಿ ಶಾಂತಿ ಕಾಪಾಡಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಸಂಸದ ಜಿ.ಎಸ್.ಬಸವರಾಜು ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಕೋಮು ಸಾಮರಸ್ಯವನ್ನು ಹಾಳು ಮಾಡಲು ಕೆಲ ದುಷ್ಕರ್ಮಿಗಳು ಹವಣಿಸುತ್ತಿದ್ದಾರೆ. ಬಜರಂಗದಳದ ಮುಖಂಡರ ಮೇಲೆ ನಡೆದಿರುವ ದಾಳಿ ಪೂರ್ವ ನಿಯೋಜಿತವಾಗಿದ್ದು, ಪೊಲೀಸರು ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.  ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ ಹಲ್ಲೇ ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ತುಮಕೂರು ಬಂದ್ ಅನ್ನು  ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಹಿಂಪಡೆದಿವೆ.

Facebook Comments