ಕಸದ ರಾಶಿಗೆ ಬೆಂಕಿ, ತಪ್ಪಿದ ಅನಾಹುತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.9-ಲಗ್ಗೆರೆ ಪೈಪ್‍ಲೈನ್ ರಸ್ತೆಯಲ್ಲಿ ಸುರಿದಿದ್ದ ತ್ಯಾಜ್ಯದ ರಾಶಿಗೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.  ಕಳೆದ ರಾತ್ರಿ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಬಿದ್ದ ಸ್ಥಳದ ಪಕ್ಕದಲ್ಲೇ ಗ್ಯಾಸ್‍ಬಂಕ್ ಇದ್ದು, ಏನಾದರೂ ಕಿಡಿ ಆರಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳು ಬೆಂಕಿ ನಂದಿಸಿದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ.

ರಾತ್ರಿ ಸಮಯದಲ್ಲಿ ಲಾರಿಯಲ್ಲಿ ಕಸ ತಂದು ಸುರಿಯುತ್ತಾರೆ. ಇದರಿಂದ ಭಾರೀ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಜನಪ್ರತಿನಿಧಿಗಳಾಗಲಿ, ಪಾಲಿಕೆ ಅಧಿಕಾರಿಗಳಾಗಲಿ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments