ಬ್ರಿಟನ್‍ನಿಂದ ಬೆಂಗಳೂರಿಗೆ ಬಂದ 151 ಮಂದಿ ನಾಪತ್ತೆ, ಸಿಲಿಕಾನ್ ಸಿಟಿಯಲ್ಲಿ ‘ಹೊಸ’ ಆತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.26- ಬ್ರಿಟನ್‍ನಿಂದ ನಗರಕ್ಕೆ ಆಗಮಿಸಿರುವ 1582 ಮಂದಿಯಲ್ಲಿ 151 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪರ್ಕಕ್ಕೆ ಸಿಗದ 151 ಜನರ ಮೊಬೈಲ್ ನಂಬರ್‍ಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

ನಾಪತ್ತೆಯಾಗಿರುವವರ ಕಾಲ್ ಡೀಟೈಲ್ಸ್ ಆಧಾರದ ಮೇಲೆ ನಾಪತ್ತೆಯಾಗಿರುವವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಉದ್ದೇಶಪೂರ್ವಕವಾಗಿ ನಾಪತ್ತೆಯಾಗಿರುವವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದರ ಜತೆಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು ಎಂದು ವಿಜಯೇಂದ್ರ ಎಚ್ಚರಿಸಿದರು.

ಬ್ರಿಟನ್‍ನಿಂದ ಆಗಮಿಸಿದ 1585 ಮಂದಿಯಲ್ಲಿ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇವರ ಜತೆ 29 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿರುವುದು ಪತ್ತೆಯಾಗಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಪಾಸಿಟಿವ್ ಪ್ರಕರಣಗಳಲ್ಲಿ ರೂಪಾಂತರ ಕೊರೊನಾ ವೈರಸ್ ಇರುವ ಬಗ್ಗೆ ಪತ್ತೆಹಚ್ಚಲು ಸೋಂಕಿತರ ಸ್ವಾಬ್‍ಅನ್ನು ಮೈಕ್ರೋ ಲ್ಯಾಬ್‍ಗೆ ರವಾನಿಸಲಾಗಿದ್ದು, ವರದಿ ಬಂದ ನಂತರವಷ್ಟೇ ರೂಪಾಂತರ ವೈರಸ್ ಹೌದೋ, ಅಲ್ಲವೋ ಎಂಬುದು ತಿಳಿದುಬರಲಿದೆ ಎಂದರು.

Facebook Comments