ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ದಕ್ಷಿಣ ಭಾರತದಲ್ಲೇ ಪ್ರಥಮ ಸ್ಥಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.8- ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ಕೃಷಿ ಮತ್ತು ಅದಕ್ಕೆ ಸಂಬಂದಿಸಿದ ರಾಷ್ಟ್ರದ 67 ಕೃಷಿ ವಿಶ್ವವಿದ್ಯಾನಿಲಯಗಳು 2010-11ನೇ ಸಾಲಿನಲ್ಲಿ ಸಾಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕೃಷಿ ವಿವಿಗೆ ದಕ್ಷಿಣ ಭಾರತ ಮತ್ತು ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರಥಮ ಶ್ರೇಣಿ ನೀಡಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ರಾಷ್ಟ್ರ ಮಟ್ಟದಲ್ಲಿ ಕೃಷಿ ಮತ್ತು ಸಂಬಂಧಿಸಿದ ವಿಶ್ವವಿದ್ಯಾನಿಲಯಗಳ ಗುಣಮಟ್ಟ ಹೆಚ್ಚಿಸಲು ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ಶ್ರೇಯಾಂಕ ಪಡೆಯುವ ನಿಟ್ಟಿನಲ್ಲಿ ಛಾಪನ್ನು ಮೂಡಿಸಲು ಕೃಷಿ ಮತ್ತು ಸಂಬಂಸಿದ ವಿಶ್ವವಿದ್ಯಾನಿಲಯಗಳಿಗೆ ಶಿಕ್ಷಣ , ಸಂಶೋಧನೆ, ಇಂಧನ ವಿಸ್ತರಣೆ, ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಮೌಲ್ಯಮಾಪನ ಮಾಡಿ ಶ್ರೇಯಾಂಕ ನೀಡುತ್ತದೆ.

ಈ ಶ್ರೇಯಾಂಕ ವಿದ್ಯಾರ್ಥಿಗಳು ಅತ್ಯುತ್ತಮ ಕೃಷಿ ವಿದ್ಯಾನಿಲಯಗಳನ್ನು ಆಯ್ಕೆಮಾಡಿಕೊಳ್ಳಲು ಮತ್ತು ಕೃಷಿ ವಿಶ್ವವಿದ್ಯಾನಿಲಯಗಳು ಸ್ವಯಂ- ಮೌಲ್ಯಮಾಪನ ಮಾಡಿ ಗುಣಮಟ್ಟ ಮತ್ತು ಸಾಮಥ್ರ್ಯವನ್ನು ಹೆಚ್ಚಿಸಿ ಕೊಳ್ಳಲು ಸಹಾಯಕವಾಗುತ್ತದೆ. ಕೃಷಿ ವಿಶ್ವವಿದ್ಯಾನಿಲಯಗಳ ನಡುವೆ ಆರೋಗ್ಯಕರ ಸ್ಪರ್ಧೆ ಏರ್ಪಡಿಸಿ ಕಾರ್ಯಕ್ಷಮತೆ ್ನ ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ.

ಕಳೆದ ವರ್ಷ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಸಂಶೋಧನಾ ಶ್ರೇಷ್ಠತೆ, ವಿದ್ಯಾರ್ಥಿ ವೇತನ ಮತ್ತು ಪ್ರವೇಶಕ್ಕೆ ಸಂಬಂಸಿದಂತೆ ಸ್ನಾತಕೋತ್ತರ ವಿದ್ಯಾರ್ಥಿಗಳ ಸಾಧನೆ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಶೇಕಡವಾರು ವಿದ್ಯಾರ್ಥಿಗಳ ಮಾನದಂಡಗಳಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದೆ.

Facebook Comments