ಬೆಂಗಳೂರಿನಾದ್ಯಂತ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.10- ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಯನ್ನು ರದ್ದು ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಹೇಳಿದರು.

ಕೊರೊನಾ ಸೋಂಕು ನಗರದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಯಾವುದೇ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸೋಂಕು ನಿಯಂತ್ರಣ ಸಂಬಂಧ ಕೇಂದ್ರ ಮಾರ್ಗಸೂಚಿ ಅನ್ವಯ ನಾವು ಈ ಕ್ರಮ ಕೈಗೊಳ್ಳಬೇಕಾಗಿದೆ. ಹಾಗಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಈ ಬಾರಿ ಅವಕಾಶವಿಲ್ಲ ಎಂದು ಅವರು ತಿಳಿಸಿದರು.

ಇದಕ್ಕೂ ಮುನ್ನ ಬೆಂಗಳೂರು ಗಣೇಶ ಉತ್ಸವ ಸಮಿತಿ ಅಧ್ಯಕ್ಷ ಅಶ್ವತ್ಥನಾರಾಯಣ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜ್ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಬಿಎಂಪಿ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ನಿರ್ಣಯವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿದರು.

ಬಕ್ರೀದ್ ಸಂದರ್ಭದಲ್ಲಿ ಕಾನೂನು ಉಲ್ಲಂಘನೆಯಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಅಕಾರಿಗಳಿಗೆ ಆಗುತ್ತಿಲ್ಲ. ಅದನ್ನು ಬಿಟ್ಟು ಗಣೇಶ ಹಬ್ಬ ಆಚರಣೆಗೆ ಅಡ್ಡಿ ಮಾಡುತ್ತಿದ್ದಾರೆ. ಅಲ್ಲದೆ ಕೇಸ್ ಹಾಕುವ ಎಚ್ಚರಿಕೆ ನೀಡುತ್ತಿದ್ದಾರೆ. ಬಿಬಿಎಂಪಿ ಕ್ರಮವನ್ನು ನಾವೆಲ್ಲರೂ ಖಂಡಿಸುತ್ತೇವೆ.

ಬಿಬಿಎಂಪಿಯವರಲ್ಲಿ ಗೊಂದಲ ಇದೆ. ಮನೆಯಲ್ಲೇ ಗಣೇಶನನ್ನು ಕರಗಿಸಿ ಎಂದು ಹೇಳುತ್ತಾರೆ. ಗಣೇಶನ ನೀರನ್ನು ಎಲ್ಲಿ ಹಾಕಬೇಕು. ಅದಕ್ಕೆ ಬಿಬಿಎಂಪಿಯವರೇ ಉತ್ತರ ಹೇಳಬೇಕು. ಈ ಬಾರಿಯ ಗಣೇಶ ಹಬ್ಬವನ್ನು ವಿನೂತನವಾಗಿ ಆಚರಿಸಲು ನಿರ್ಧರಿಸಿದ್ದೇವೆ.

ಕೊರೊನಾ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಅಡ್ಡಿಯಾಗಿದೆ. ಇದರಿಂದ ಮೆರವಣಿಗೆಗಳನ್ನು ಮಾಡದಿರಲು ನಿರ್ಧಾರ ಮಾಡಲಾಗಿದೆ. ನಮ್ಮ ಕಡೆಯಿಂದ ಮೆರವಣಿಗೆ ಇರುವುದಿಲ್ಲ. ಆದರೆ ಪ್ರತಿಷ್ಠಾಪನೆ ಇರುತ್ತದೆ ಎಂದು ಸಮಿತಿಯ ಅಧ್ಯಕ್ಷರು ಹೇಳಿದ್ದಾರೆ.

ಗಣೇಶ ಮೂರ್ತಿಯನ್ನು ಕೆರೆ, ಕಲ್ಯಾಣಿಗಳಿಗೆ ಬಿಟ್ಟರೆ ಕೇಸ್ ಹಾಕಲಾಗುತ್ತದೆ ಎಂದು ಬಿಬಿಎಂಪಿಯವರು ಹೇಳಿದ್ದಾರೆ. ಈ ನಿರ್ಣಯವನ್ನು ಪುನರ್ ಪರಿಶೀಲಿಸುವಂತೆ ಮತ್ತೆ ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಈ ಬಾರಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸಮಿತಿ ನಿರ್ಧರಿಸಿದೆ. ಆಯುಷ್ ಇಲಾಖೆ ಸೂಚಿಸಿರುವಂತೆ 7 ಲಕ್ಷ ಜನರಿಗೆ ಹೋಮಿಯೋಪತಿ , ಆರ್ಸೆನಿಕ್ ಆಲ್ಬಂ 30 ರೋಗ ನಿರೋಧಕ ಔಷಯನ್ನು ಜನರಿಗೆ ಉಚಿತವಾಗಿ ಹಂಚಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin