ಲಿಫ್ಟ್ ಕುಸಿದು ನಾಲ್ವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

leftಬೆಂಗಳೂರು, ನ.12-ಹೋಟೆಲೊಂದರ ಲಿಫ್ಟ್ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಎಂ.ಎಂ.ರಸ್ತೆಯಲ್ಲಿರುವ ಹೊಟೇಲ್‍ವೊಂದರಲ್ಲಿ ರಾತ್ರಿ ಲಿಫ್ಟ್ ಕುಸಿದಿದೆ. ಪರಿಣಾಮವಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪುಲಕೇಶಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments