ಬೆಂಗಳೂರಲ್ಲಿ ಲಾಕ್ ಡೌನ್ ಜಾರಿ, ಅನಗತ್ಯವಾಗಿ ಓಡಾಡಿದರೆ ವಾಹನ ಸೀಜ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು)ಜು.14:- ಕೊರೋನಾ ಹೆಚ್ಚಳ ಹಿನ್ನೆಲೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ನಿರ್ಧರಿಸಲಾಗಿದ್ದು, ಆದ್ದರಿಂದ ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡಿದರೇ ವಾಹನ ಸೀಜ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ಗೆ ಕೆಲ ಜಿಲ್ಲೆಗಳು ಅನುಮತಿ ಕೇಳಿದ್ದವು. ಹೀಗಾಗಿ ಲಾಕ್ ಡೌನ್ ನಿರ್ಧಾರ ಆಯಾ ಡಿಸಿಗಳಿಗೆ ಬಿಡಲಾಗಿದೆ.

ಕೊರೋನಾ ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳು ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ವೇಳೆ ಯಾರಾದರೂ ಅನಗತ್ಯವಾಗಿ ಓಡಾಡಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಾರ್ನಿಂಗ್ ನೀಡಿದರು.

ಸೀಲ್ ಡೌನ್ ಪ್ರದೇಶ ಸಂಪೂರ್ಣ ಬಂದ್ ಆಗಿರುತ್ತದೆ. ಮಧ್ಯಾಹ್ನ 12 ಗಂಟೆವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತದೆ. ಅನಗತ್ಯವಾಗಿ ಓಡಾಡಿದರೇ ವಾಹನ ಸೀಜ್ ಮಾಡಲಾಗುತ್ತದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Facebook Comments

Sri Raghav

Admin