ಬೆಂಗಳೂರಿನ ನರ್ಸಿಂಗ್ ಕಾಲೇಜ್‍ನ 51 ವಿದ್ಯಾರ್ಥಿಗಳಿಗೆ ಕೊರೊನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.26- ಕೇರಳ ವಿದ್ಯಾರ್ಥಿಗಳೇ ಹೆಚ್ಚಿರುವ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಈಗಾಗಲೇ ನರ್ಸಿಂಗ್ ಕಾಲೇಜುಗಳ ನೂರಾರು ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೆ ನೆಲಮಂಗಲದ ಬೇಗೂರಿನಲ್ಲಿರುವ ಅಂಬಿಕಾ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಸೋಂಕು ಕಾಣಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳನ್ನು ನೆಲಮಂಗಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವ ಇತರ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲೇ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ನಿನ್ನೆ ನಗರದಲ್ಲಿರುವ ಸೌಂದರ್ಯ ನರ್ಸಿಂಗ್ ಕಾಲೇಜಿನ 22 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿತ್ತು. ಇಂದು ನೆಲಮಂಗಲದ ಮತ್ತೊಂದು ಕಾಲೇಜಿನ 51 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಎಲ್ಲೆಡೆ ಆತಂಕ ಎದುರಾಗಿದೆ.

Facebook Comments