ಡಿಜೆಹಳ್ಳಿ ಗಲಾಟೆ ಕುರಿತು ರಾಜ್ಯಪಾಲರಿಗೆ ಸರ್ಕಾರದಿಂದ ವರದಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.12- ನಗರದ ಡಿಜೆಹಳ್ಳಿ ಮತ್ತು ಕೆಜೆಹಳ್ಳಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಗಲಭೆ ಪ್ರಕರಣ ಸಂಬಂಧ ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ರಾಜ್ಯ ಸರ್ಕಾರ ವಿಸ್ತೃತ ವರದಿಯನ್ನು ಸಲ್ಲಿಸಿದೆ.

ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರು ಘಟನೆ ಕುರಿತಂತೆ ಸಂಪೂರ್ಣ ವರದಿ ನೀಡಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸೂಚನೆ ಕೊಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಗಲಭೆ ಸಂಬಂಧ ರಾಜ್ಯಪಾಲರಿಗೆ ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಲ್ ಮೂಲಕ ವರದಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಗಲಭೆಯಲ್ಲಿ ಉಂಟಾಗಿರುವ ಪ್ರಾಣಹಾನಿ, ಆಸ್ತಿಪಾಸ್ತಿಗಳು, ವಾಹನಗಳು, ಗಾಯಾಳುಗಳು, ಗಲಭೆಗೆ ಕಾರಣ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಸೇರಿದಂತೆ ಪ್ರತಿಯೊಂದನ್ನು ರಾಜ್ಯಪಾಲರಿಗೆ ವರದಿಯನ್ನು ಹಸ್ತಾಂತರಿಸಿದ್ದಾರೆ.

ಎರಡು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿಸುವ್ಯವಸ್ಥೆ ಕಾಪಾಡಲು ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಘಟನಾ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕೆ.ಜೆಹಳ್ಳಿ ಮತ್ತು ಡಿಜೆಹಳ್ಳಿಯಲ್ಲಿ ಕಫ್ರ್ಯೂ ಜಾರಿ ಮಾಡಲಾಗಿದ್ದು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂದು ಬೇರೆ ಬೇರೆ ಭಾಗಗಳಿಂದ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗುವುದು. ಘಟನಾ ಸ್ಥಳದಲ್ಲಿ ಹಿರಿಯ ಪೊಲೀಸ್ ಅಕಾರಿಗಳು ಸಹ ವಾಸ್ತವ್ಯ ಹೂಡಿದ್ದಾರೆ.

ಸಾರ್ವಜನಿಕರು ಆತಂಕಪಡದಂತೆ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಕೆಲವು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ತಪ್ಪಿತಸ್ಥರ ಮೇಲೆ ಸರ್ಕಾರ ಕಾನೂನು ಕ್ರಮ ತೆಗೆದುಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ.

Facebook Comments

Sri Raghav

Admin