ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಹೃದಯಾಘಾತ, ಪ್ರಯಾಣಿಕ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಇಂದೋರ್,ಅ.22- ಬೆಂಗಳೂರಿನಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ಆರಂಭಿಸಿದ ದೆಹಲಿ ಮೂಲದ ಮನೋಜ್‍ಕುಮಾರ್ ಅಗರ್‍ವಾಲ್ ಅವರಿಗೆ ನಿನ್ನೆ ರಾತ್ರಿ 9.30ರ ಸುಮಾರಿನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ತಕ್ಷಣವೇ ವಿಮಾನದ ಮಾರ್ಗ ಬದಲಾವಣೆ ಮಾಡಿ ಇಂದೋರ್‍ನ ದೇವಿ ಅಹಿಲ್ಯಬಾಯಿ ಹೋಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿಸಲಾಗಿದೆ. ಸಮೀಪದ ಬಂತೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುನೀಲ್ ಬಂತೀಯ ತಿಳಿಸಿದ್ದಾರೆ.

ತೀವ್ರ ಹೃದಯಘಾತದಿಂದ ಅಗರ್‍ವಾಲ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಹೇರೋಡ್ರಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶವ ಪರೀಕ್ಷೆಯ ಬಳಿಕ ಸಂಬಂಕರಿಗೆ ಪಾರ್ಥೀವ ಶರೀರವನ್ನು ಹಸ್ತಾಂತರಿಸುವುದಾಗಿ ಅಕಾರಿಗಳು ತಿಳಿಸಿದ್ದಾರೆ.

Facebook Comments