ಬೆಂಗಳೂರಿನ ಸಂಚಾರ ವ್ಯವಸ್ಥೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.23- ಬೆಂಗಳೂರು ಸಂಚಾರ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ಮಾಡುವ ಉದ್ದೇಶವಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಬೆಂಗಳೂರು ನಗರ ಸಂಚಾರ ಪೊಲೀಸ್, ಸಾರಿಗೆ ಇಲಾಖೆ, ಬಿಬಿಎಂಪಿ ಹಮ್ಮಿಕೊಂಡಿದ್ದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ 2020-21 ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗೃಹ ಇಲಾಖೆ, ಬಿಬಿಎಂಪಿ ಜೊತೆಗೂಡಿ ಮುಂದಿನ ದಿನಗಳಲ್ಲಿ ಮಾದರಿಯಾಗುವ ಸಂಚಾರ ನಿರ್ವಹಣೆ ಮಾಡಲಾಗುವುದು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.  2021ನೇ ವರ್ಷವನ್ನು ಸಂಚಾರ ಸುರಕ್ಷತೆ ಸಂಚಾರ ನಿರ್ವಹಣೆ ವರ್ಷವಾಗಿ ಘೋಷಣೆ ಮಾಡಲಾಗಿದೆ ಎಂದರು.

ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಂದ ವಸೂಲು ಮಾಡುವ ದಂಡದಲ್ಲಿ ಶೇ.50ರಷ್ಟನ್ನು ಸಂಚಾರ ನಿರ್ವಹಣೆಗೆ ಬಳಸಲು ಆರ್ಥಿಕ ಇಲಾಕೆ ಸಮ್ಮತಿಸಿದೆ. ಆದರೆ ಶೇ.100ರ್ಟು ದಂಡದ ಹಣವನ್ನು ಕೊಡಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗುವುದು.

ಅಪಘಾತ ನಡೆಯುವ ಸ್ಥಳಗಳ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯಡಿ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರಕ್ಕೆ ಕೋರಲಾಗಿದೆ ಎಂದು ಹೇಳಿದರು. ಒಂದು ವರ್ಷದೊಳಗೆ ಬೆಂಗಳೂರು ಸಂಚಾರ ವ್ಯವಸ್ಥೆ ಮಾದರಿಯಾಗುವಂತೆ ಮಾಡುತ್ತೇವೆ ಎಂದು ತಿಳಿಸಿದರು.

Facebook Comments