ಸಿಎಂ ಅಂಗಳ ತಲುಪಿದ ಬೆಂಗಳೂರು ವಿವಿ ವಿವಾದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.4- ಬೆಂಗಳೂರು ವಿಶ್ವವಿದ್ಯಾಲ ಯದ ಕುಲಸಚಿವರ ವರ್ಗಾವಣೆಗೆ ಸಂಬಂಧಿಸಿದ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತಲ್ಲದೆ ಇದೀಗ ಮುಖ್ಯಮಂತ್ರಿ ಅಂಗಳವನ್ನು ತಲುಪಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರನ್ನು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ವರ್ಗಾವಣೆ ಮಾಡಿರುವ ವಿಚಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಗಮನಕ್ಕೆ ತಾರದೆ.

ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದರು. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಯಾವ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದನ್ನು ಎದುರು ನೋಡುತ್ತಿರುವುದಾಗಿ ಸಚಿವರ ಆಪ್ತ ಮೂಲಗಳು ತಿಳಿಸಿವೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಜ್ಯೋತಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಕೊಟ್ರೇಶ್ ಅವರನ್ನು ನೇಮಿಸಿದ್ದು, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಎಂಬ ಆಕ್ಷೇಪ ಕೇಳಿಬಂದಿತ್ತು.

ಐಎಎಸ್ ಅಥವಾ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ಮಾತ್ರ ಆಡಳಿತದ ಹುದ್ದೆಗಳಿಗೆ ನೇಮಕ ಮಾಡಬೇಕು ಎಂಬ ತಿದ್ದುಪಡಿ ಕಾಯ್ದೆ ಅನ್ವಯ ಎಲ್ಲಾ ವಿವಿಗಳಿಗೆ ಐಎಎಸ್ ಅಥವಾ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಅದರಂತೆ ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರನ್ನಾಗಿ ಐಎಎಸ್ ಅಧಿಕಾರಿಯಾಗಿದ್ದ ಜ್ಯೋತಿ ಅವರನ್ನು ನೇಮಕ ಮಾಡಲಾಗಿತ್ತು.

ಪ್ರಾಧ್ಯಾಪಕರ ನೇಮಕಾತಿ ಮತ್ತು ವರ್ಗಾವಣೆಯನ್ನು ಉನ್ನತ ಶಿಕ್ಷಣ ಇಲಾಖೆ ಮಾತ್ರ ಕೈಗೊಳ್ಳಬಹುದು. ಕೊಟ್ರೇಶ್ ಅವರು ಅಧಿಕಾರ ಹಸ್ತಾಂತವಾಗದಿದ್ದರೂ ತಮ್ಮ ಕಚೇರಿಗೆ ಅನಧಿಕೃತ ಪ್ರವೇಶ ಮಾಡಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಜ್ಯೋತಿ ಅವರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Facebook Comments