ಕಾಡಾನೆಗಳ ದಾಳಿ : ವೃದ್ಧ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ಬಂಗಾರಪೇಟೆ,ಮಾ.15-ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಜಮೀನಿಗೆ ತೆರಳುತ್ತಿದ್ದ ರೈತರೊಬ್ಬರ ಮೇಲೆ ದಾಳಿ ಮಾಡಿರುವ ಘಟನೆ ತಾಲ್ಲೂಕಿನ ಗುಲ್ಲಹಳ್ಳಿ ಬಳಿ ನಡೆದಿದೆ.  ಚಿಗಳೂರು ಗ್ರಾಮದ ನಿವಾಸಿ ಬೀರಪ್ಪ(62) ಆನೆ ದಾಳಿಗೊಳಗಾದ ರೈತ.

ಇಂದು ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆಗಳ ಹಿಂಡು ಏಕಾಏಕಿ ಬೀರಪ್ಪನ ಮೇಲೆ ದಾಳಿ ನಡೆಸಿವೆ. ಇವರ ಚೀರಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆತನನ್ನು ರಕ್ಷಿಸಿ ಚಿಕಿತ್ಸೆಗಾಗಿ ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಆನೆ ದಾಳಿಗೆ ಇಬ್ಬರು ಮೃತಪಟ್ಟಿದ್ದರು. ಈಗ ಮತ್ತೊಬ್ಬರ ಮೇಲೆ ದಾಳಿ ಮಾಡಿರುವುದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.

ಕಳೆದ ಎರಡು ತಿಂಗಳಿನಿಂದಲೂ ಗಡಿಭಾಗದಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ರೈತರ ಜಮೀನುಗಳಿಗೆ ಲಗ್ಗೆ ಇಡುತ್ತ ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದು, ಕಾಡಾನೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.  ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಆನೆ ಹಿಂಡನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

Facebook Comments