ಬ್ಯಾಂಕಾಕ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾಮಾಂತರ, ಜೂ.6- ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಥೈಲ್ಯಾಂಡ್ ರಾಜಧಾನಿ ಬ್ಯಾಕಾಂಕ್‍ನಿಂದ ನಿನ್ನೆ ರಾತ್ರಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 28ನೆ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ ಒಂದು ಮಗು, 56 ಪುರುಷರು ಮತ್ತು 23 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಕಳುಹಿಸಿಕೊಡಲಾಯಿತು ಎಂದು ಅವರು ತಿಳಿಸಿದ್ದಾರೆ.

Facebook Comments