ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸರಳವಾಗಿ ಬಸವ ಸಮಿತಿ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸಮಾನತೆ, ಕಾಯಕ ಮತ್ತು ದಾಸೋಹ ತತ್ವವಾಗಿವೆ. ಸರಳ ಸಾಹಿತ್ಯದ ವಚನಗಳ ಸತ್ವ ಸಾರ್ವಕಾಲಿಕ ಶ್ರೇಷ್ಠವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಣಿಸಿದರು.

ಬಸವೇಶ್ವರ ವೃತ್ತದಲ್ಲಿ ಬಸವ ಸಮಿತಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ನಾಡಿನ ಜನತೆಗೆ ಶುಭಾಶಯ ಕೋರಿ ಅವರು ಮಾತನಾಡಿದರು. ಅಣ್ಣ ಬಸವಣ್ಣನವರ ತತ್ವಾದರ್ಶಗಳಲ್ಲಿ ಒಂದಿಷ್ಷನ್ನಾದರೂ ಜೀವನದಲ್ಲಿ ಅಳವಡಿಸಿಕೊಂಡು ಅರ್ಥಪೂರ್ಣ ಜಯಂತಿ ಆಚರಿಸೋಣವೆಂಬ ಆಶಯ ವ್ಯಕ್ತಪಡಿಸಿದರು.

ವಚನ ಸಾಹಿತ್ಯ ಪ್ರಸಾರ, ಅನುಭವ ಮಂಟಪ ಪುನಃಶ್ಚೇತನಕ್ಕೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ಆಯವ್ಯಯದಲ್ಲಿ ಅನುದಾನ ಕಾದಿರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಹೇಳಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅರವಿಂದ ಜತ್ತಿ, ಶರಣರು, ಗಣ್ಯರು ಇದ್ದರು.

# ವಚನಗಳು ಕ್ರಾಂತಿ ಗೀತೆಗಳು
ಬಸವಣ್ಣನವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕ್ರಾಂತಿಕಾರಿ ಬಸವಣ್ಣನವರ 887ನೇ ಜಯಂತಿ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಟ್ವೀಟ್ ಮೂಲಕ ಶುಭಾಶಯ ಕೋರಿರುವ ಅವರು, ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು – ಸಂಸತ್ತಿನ ಪರಿಕಲ್ಪನೆಯನ್ನು ತೋರಿಸಿಕೊಟ್ಟವರು ಬಸವಣ್ಣ ಎಂದು ಸ್ಮರಿಸಿದ್ದಾರೆ.

ಬಸವಣ್ಣನವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು. ಸಮಸ್ತ ಕನ್ನಡಿಗರಿಗೂ ಬಸವ ಜಯಂತಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

Facebook Comments

Sri Raghav

Admin