ರಾಜ್ಯಾದ್ಯಂತ ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ: ಗೃಹ ಸಚಿವ ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.31- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡ್ರಗ್ಸ್ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ ಪೆÇಲೀಸರಿಗೆ ನಿರ್ಧಿಷ್ಟ ಸೂಚನೆ ನೀಡಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.   ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಬಳಿಯೂ ಡ್ರಗ್ಸ್ ಬಗ್ಗೆ ಸಾಕಷ್ಟು ಮಾಹಿತಿ ಇದೆ. ಇದನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರು ಮತ್ತಿತರ ಕಡೆ ಈ ಮಾಫಿಯಾವನ್ನು ನಿಯಂತ್ರಣ ಮಾಡಲು ಪೆÇಲೀಸರಿಗೆ ಸೂಚಿಸಿರುವುದಾಗಿ ತಿಳಿಸಿದರು.

ನಿರ್ದೇಶಕ ಇಂದ್ರಜಿತ್ ಲಂಕೇಶ್‍ಗೆ ಡ್ರಗ್ಸ್ ಮಾಫಿಯಾ ಕುರಿತಂತೆ ಏನೇನು ಮಾಹಿತಿಯೂ ಇದೆಯೋ ಅದನ್ನು ತನಿಖಾಧಿಕಾರಿಗಳ ಮುಂದೆ ಮಾಹಿತಿ ನೀಡಲಿ. ಇದನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಸರ್ಕಾರ ಇದನ್ನು ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಮನುಕುಲಕ್ಕೆ ಕಂಟಕವಾಗಿರುವ ಡ್ರಗ್ಸ್ ಹಾವಳಿಯನ್ನು ಯಾವ ರೀತಿ ನಿಯಂತ್ರಣ ಮಾಡಬಹುದು ಎಂಬುದರ ಬಗ್ಗೆ ಚರ್ಚೆ ಆರಂಭವಾಗಿದೆ. ಯಾರೇ ಆಗಲಿ ತಮ್ಮ ಬಳಿ ಮಾಹಿತಿ ಇದ್ದರೆ ಪೆÇಲೀಸರಿಗೆ ತಿಳಿಸಿ. ಪರಿಣಾಮಕಾರಿಯಾಗಿ ನಿಯಂತ್ರಿಸಲು ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಹೇಳಿದರು.

ಇಂದು ಹಿರಿಯ ಪೆÇಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ , ಬೆಂಗಳೂರುನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಪಡೆದು ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಭೇಟಿಯಾಗಿ ಡ್ರಗ್ಸ್ ಪ್ರಕರಣ ಕುರಿತಂತೆ ಕೆಲವು ಮಾಹಿತಿಯನ್ನು ಹಂಚಿಕೊಂಡರು.  ಆರ್‍ಟಿನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿದ ಸಂದೀಪ್ ಪಾಟಿಲ್ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

ಕಳೆದ ವಾರ ಬೆಂಗಳೂರಿನಲ್ಲಿ ವಶಪಡಿಸಿಕೊಂಡಿದ್ದ ಡ್ರಗ್ಸ್ ವಿಚಾರಣೆ, ವಶದಲ್ಲಿರುವ ಆರೋಪಿಗಳು ನೀಡಿರುವ ಮಾಹಿತಿ, ಸ್ಯಾಂಡಲ್‍ವುಡ್‍ನ ನಟನಟಿಯರು ಸೇರಿದಂತೆ ಮತ್ತಿತರರು ಇದರ ಸಂಪರ್ಕದಲ್ಲಿರುವುದು ಸೇರಿದಂತೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ.

Facebook Comments