ಜನತಾ ಪರಿವಾರವನ್ನು ಒಗ್ಗೂಡಿಸುತ್ತೇವೆ : ಹೊರಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.20- ಜನತಾ ಪರಿವಾರವನ್ನು ಒಗ್ಗೂಡಿಸಲು ನಾವು ಮುಂದಾಗಿದ್ದೇವೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಮಾದರಿಯಲ್ಲಿ ಜನತಾ ಪರಿಹಾರವನ್ನು ರಾಜ್ಯದಲ್ಲೂ ಒಗ್ಗೂಡಿಸುತ್ತೇವೆ. ಜನತಾ ಪರಿವಾರದಲ್ಲಿದ್ದವರು ಬೇರೆ ಬೇರೆ ಪಕ್ಷಗಳಿಗೆ ಹೋಗಿ ಈಗಾಗಲೇ ಸೋಲನ್ನು ಕಂಡಿದ್ದಾರೆ ಎಂದರು.

ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ತೀರ್ಮಾನವನ್ನು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೈಗೊಳ್ಳುತ್ತಾರೆ. ಇಬ್ರಾಹಿಂ ಅವರ ಜೊತೆಗೂಡಿ ಪಕ್ಷ ಸಂಘಟನೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಅಸಮಾಧಾನಗೊಂಡಿರುವ ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ಸೇರಿದಂತೆ ಎಲ್ಲರ ಮನವೊಲಿಕೆ ಮಾಡುತ್ತೇವೆ. ನಮ್ಮಲ್ಲಿ ಪರಸ್ಪರ ಸಂಹವನದ ಸಮಸ್ಯೆಯಿದೆ. ಹೀಗಾಗಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಂತಾಗಿದೆ. ಯಾರಿಗೆ ಏನೇ ಹೇಳಿದರೂ ಅದನ್ನು ನಂಬಿಬಿಡುತ್ತಾರೆ ಎಂದರು.

Facebook Comments

Sri Raghav

Admin