ಜಾತಿ ರಾಜಕಾರಣಕ್ಕೆ ಹೊರಟ್ಟಿ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಏ.21- ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಅವರು ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ಹೋರಾಟದ ಅಸ್ತ್ರವನ್ನು ಹಿಡಿದು ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ.

ಅಲ್ಲದೇ ಮಠ ಮಾನ್ಯಗಳು ಎಲ್ಲರಿಗೂ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಮೈತ್ರಿ ಪಕ್ಷದ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಕೀಡಿಕಾರಿದರು.

ಪ್ರಹ್ಲಾದ್ ಜೋಶಿಯವರಿಂದ ಲಿಂಗಾಯತ ಧರ್ಮಕ್ಕೆ ಅನ್ಯಾಯವಾಗಿದೆ ಎಂಬುವಂತಹ ವಿನಯ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಪಕ್ಷ ಲಿಂಗಾಯತ ಧರ್ಮವನ್ನು ತುಳಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ವಿನಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ .

ವಿನಃ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷ ಜಾತ್ಯಾತೀತ ರಾಜಕೀಯ ಪಕ್ಷಗಳಾಗಿವೆ. ಧರ್ಮ ಹೋರಾಟವೇ ಬೇರೆ, ರಾಜಕೀಯವೇ ಬೇರೆ ಒಂದಕ್ಕೊಂದು ಸಂಬಂಧವಿಲ್ಲ ಎಂದು ಅವರು ಹೇಳಿದರು.

ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಸಚಿವ ಸ್ಥಾನ ಸಿಗಬೇಕಿತ್ತು. ಸಿಗಲಿಲ್ಲ ಅಲ್ಲದೇ ಸಭಾಪತಿ ಸ್ಥಾನ ಕೂಡ ಕೈ ತಪ್ಪಿದ್ದು ಸ್ವಲ್ಪಮಟ್ಟಿನ ಅಸಮಾಧಾನವಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಅವರು ಲಿಂಗಾಯತ ಶಾಸಕರ ಸಭೆ ಕರೆದು ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಲೋಕಸಭಾ ಮೈತ್ರಿ ಅಭ್ಯರ್ಥಿ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಬೇಕು ಒತ್ತಾಯ ಮಾಡಿದರು.

ಚುನಾವಣೆಗೆ ಹಾಗೂ ವಿರಶೈವ ಲಿಂಗಾಯತ ಧರ್ಮ ಹೋರಾಟಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದರು.
ಲಿಂಗಾಯತ ಮುಖಂಡರು ಉಪಸ್ಥಿತರಿದ್ದರು

Facebook Comments

Sri Raghav

Admin