ಬಿಜೆಪಿಗೆ ಅತೃಪ್ತರೇ ಪಾಠ ಕಲಿಸುತ್ತಾರೆ : ಹೊರಟ್ಟಿ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಜು.26- ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು, ಅವರಿಗೆ ದೇವರ ಒಳ್ಳೆಯದು ಮಾಡಲಿ. ಆದರೆ ಬಿ ಎಸ್ ವೈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಇದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ. ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಾಳ್ಮೆ ಇತ್ತು. ಆ ತಾಳ್ಮೆ ಬಿಎಸ್‍ವೈಗೆ ಇಲ್ಲಾ. ಸರ್ಕಾರ ನಡೆಸುವುದು ತುಂಬಾ ಕಷ್ಟ. ಅತೃಪ್ತರನ್ನು ಸೆಳೆಯಲು ಸಚಿವ ಸ್ಥಾನ ನೀಡುವ ಭರವಸೆಯನ್ನು ಬಿಜೆಪಿಯವರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅತೃಪ್ತರನ್ನು ನಿಭಾಯಿಸುವುದು ಬಿಜೆಪಿಗೆ ಬಹಳ ಕಷ್ಟ. ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಕೊಡಲು ಸಾಧ್ಯವಿಲ್ಲ. ಹೀಗಾಗಿ ಕೇಂದ್ರದ ಮೋದಿ ಸರ್ಕಾರ ಪರಿಶೀಲನೆ ನಡೆಸಬೇಕಾಗಿತ್ತು. ಇಂದು ಕಾಂಗ್ರೆಸ್ ಬಿಟ್ಟವರು ನಾಳೆ ಬಿಜೆಪಿ ಬಿಡಲ್ಲಾ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಮೈತ್ರಿ ಸರ್ಕಾರದಲ್ಲಿ ಬಹಳ ಜನ ಟ್ರಬಲ್ ಶೂಟರ್ ಇದ್ದರು, ಆದರೆ ಬಿ ಜೆಪಿ ಯಲ್ಲಿ ಟ್ರಬಲ್ ಕ್ರಿಯೇಟರ್ ಇದ್ದಾರೆ. ಈ ಕಾರಣದಿಂದ ಬಿಜೆಪಿ ಬಹಳ ಕಾಲ ನಡೆಯುವುದಿಲ್ಲ ಎಂದು ಲೇವಡಿ ಮಾಡಿದರು.
ಇನ್ನೂ ಶಾಸಕರನ್ನು ಅನರ್ಹ ಮಾಡಿದ್ದು ಸರಿಯಾದ ಕ್ರಮವಾಗಿದ್ದು, ಸ್ಪೀಕರ್ ವಿಚಾರ ಮಾಡಿಯೇ ನಿರ್ಧಾರ ಕೈಗೊಂಡಿದ್ದಾರೆ ಎಂದರು.

Facebook Comments