ಪರಿಷತ್‍ನ ಸಭಾಪತಿ ಚುನಾವಣೆ : ಜೆಡಿಎಸ್‍ನಿಂದ ಬಸವರಾಜ ಹೊರಟ್ಟಿ ಸ್ಪರ್ಧೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.6- ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಜೆಡಿಎಸ್‍ನಿಂದ ಮಾಜಿ ಸಚಿವ ಬಸವರಾಜ ಹೊರಟ್ಟಿ ಸ್ಪರ್ಧೆಗಿಳಿಯಲಿದ್ದಾರೆ. ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಂತೆ ಸಭಾಪತಿ ಸ್ಥಾನದ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿವೆ.

ಹೀಗಾಗಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿಯವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲಾಗಿತ್ತು.

ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾದರು. ಸಭಾಪತಿ ಸ್ಥಾನಕ್ಕೆ ಕೆ.ಪ್ರತಾಪ್‍ಚಂದ್ರ ಶೆಟ್ಟಿಯವರು ನೀಡಿದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ಫೆ.9ರಂದು ಸಭಾಪತಿ ಸ್ಥಾನದ ಚುನಾವಣೆ ಮೆಲ್ಮನೆಯಲ್ಲಿ ನಡೆಯಲಿದ್ದು, ಫೆ.8ರ ಮಧ್ಯಾಹ್ನ 12 ಗಂಟೆ ಒಳಗಾಗಿ ಸಭಾಪತಿ ಸ್ಥಾನಕ್ಕೆ ಸ್ರ್ಪಸುವವರು ವಿಧಾನಪರಿಷತ್‍ನ ಕಾರ್ಯದರ್ಶಿಯವರಿಗೆ ಸೂಚನಾ ಪತ್ರವನ್ನು ಸಲ್ಲಿಸಬೇಕಾಗಿದೆ. ಸೋಮವಾರ ಸಭಾಪತಿ ಸ್ಥಾನದ ಚುನಾವಣೆಗೆ ಸ್ರ್ಪಸುವ ಬಗ್ಗೆ ಬಸವರಾಜ್ ಹೊರಟ್ಟಿ ಪರವಾಗಿ ಸೂಚನಾ ಪತ್ರವನ್ನು ಸಲ್ಲಿಸಲಾಗುತ್ತದೆ.

Facebook Comments

Sri Raghav

Admin