ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.29- ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಮಾಜಿಕ ಅಂತರ ಕಾಯ್ದುಕೊಳ್ಳದ ಕಾಂಗ್ರೆಸ್‍ನ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಫ್‍ಐಆರ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುವ ವೇಳೆ ಸಮಾಜಿಕ ಅಂತರ ಕಾಪಾಡಿಕೊಂಡಿಲ್ಲ, ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಲ್ಲ, ಪ್ರತಿಭಟನೆಗೆ ಅನುಮತಿ ಪಡೆಯುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಎಲ್ಲಾ ಸುರಕ್ಷಿತ ನಿಯಮಗಳನ್ನು ಪಾಲಿಸುವ ಭರವಸೆ ನೀಡಿದ್ದರು. ಆದರೆ ಯಾವುದನ್ನೂ ಪಾಲನೆ ಮಾಡಿಲ್ಲ.

ಎನ್‍ಡಿಆರ್‍ಎಫ್ 2020 ಕಾಯ್ದೆ ಸಂಪೂರ್ಣ ಉಲ್ಲಂಘನೆ ಆಗಿದೆ ಹೀಗಾಗಿ ಪ್ರತಿಭಟನೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಈ ಬಗ್ಗೆ ತಕ್ಷಣವೇ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

Facebook Comments