ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಕೊರೋನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.16- ಗೃಹ ಸಚಿವ ಬಸವರಾಜ್ ಬೊಮ್ಮಯಿಗೂ ಮಹಾಮಾರಿ ಕೊರೋನಾ ಸೋಂಕು ಹಬ್ಬಿದೆ. ಹೀಗಾಗಿ ಬೊಮ್ಮಯಿ ಅವರು, ಹೋಂ ಕ್ವಾರೈಂಟ್ ನ್ ಗೆ ಒಳಗಾಗಿದ್ದು, ಇನ್ನು ಕೆಲವು ದಿನಗಳ ಕಾಲ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ತಮಗೆ ಕೋವಿಡ್-19 ಸೋಂಕು ದೃಡಪಟ್ಟಿರುವುದನ್ನು ಬೊಮ್ಮಯಿ ಅವರು ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಖಚಿತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ.

ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Facebook Comments