ಬಿಬಿಎಂಪಿ ವಿಳಂಬ ಧೋರಣೆಗೆ ಆಕ್ರೋಶ, ಸಂತ್ರಸ್ತರಿಗೆ ಸಿಕ್ಕಿಲ್ಲ ಸೂಕ್ತ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

ಯಶವಂತಪುರ, ಅ.17- ದೊಡ್ಡಬಿದರ ಕಲ್ಲು ಕೆರೆ ಕೋಡಿ ಒಡೆದು ಹಾನಿಗೊಳಗಾಗಿದ್ದ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲು ಬಿಬಿಎಂಪಿ ವಿಫಲವಾಗಿದೆ. ನಗರದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ದೊಡ್ಡಬಿದರಕಲ್ಲು ಕೆರೆ ಕೋಡಿ ಒಡೆದು ಭವಾನಿನಗರ, ಅನ್ನಪೂರ್ಣೇಶ್ವರಿ ನಗರ, ಮುನೇಶ್ವರ ಹಾಗೂ ಅಂದಾನಪ್ಪ ಬಡಾವಣೆಗಳು ಸಂಪೂರ್ಣ ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿದೆ.

ಪ್ರತಿಯೊಂದು ಮನೆಯ ಸಮೀಕ್ಷೆ ನಡೆಸಿ ಹಾನಿ ಪ್ರಮಾಣವನ್ನು ಆಧರಿಸಿ ಸೂಕ್ತ ಪರಿಹಾರ ನೀಡುವುದಾಗಿ ಪರಿಶೀಲನೆ ವೇ¼ ಮೇಯರ್ ಗೌತಮï ಕುಮಾರ್ ಜೈನ್ ಹಾಗೂ ಆಯುಕ್ತ ಅನಿಲ್ ಕುಮಾರ್ ಭರವಸೆ ನೀಡಿದ್ದರು ಹಾನಿಯಾಗಿ ಒಂದು ವಾರ ಕಳೆದರೂ ಬಿಬಿಎಂಪಿಯಿಂದ ಇನ್ನೂ ನಯಾಪೈಸೆ ಪರಿಹಾರ ಸಿಕ್ಕಿಲ್ಲ . ಅಷ್ಟರಲ್ಲಾಗಲೇ ಬರೀ ಇನ್ನೂರು ಕುಟುಂಬಗಳಿಗೆ ಮಾತ್ರ ಕೇವಲ ಹತ್ತು ಸಾವಿರದಂತೆ ಪರಿಹಾರದ ಹಣ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ.

ವಾಸ್ತವದಲ್ಲಿ 500ಕ್ಕೂ ಅಧಿಕ ಮನೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಪ್ರತಿ ಕುಟುಂಬಕ್ಕೂ ಕನಿಷ್ಠ 35 ಸಾವಿರ ರೂ. ಪರಿಹಾರ ನೀಡಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು ಆಗಿರುವ ನಷ್ಟವನ್ನು ಕಣ್ಣಾರೆ ಕಂಡಿದ್ದಾರೆ. ಆದರೂ ಸಂತ್ರಸ್ತರ ಸಂಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬಡಾವಣೆ ನಿವಾಸಿಗಳು ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಹಾರ ಹಣದ ವಿಚಾರದಲ್ಲೂ ಅನ್ಯಾಯ ವಾಗಿದೆ. ಮನೆಗಳಿಗೆ ನೀರು ನುಗ್ಗಲು ಕಾರಣ ವಾದ ಕೆರೆ ಹಾಗೂ ರಾಜಕಾಲುವೆ ಒತ್ತುವರಿ ತೆರವುಗೊಳಿಸು ವಂತೆ ಕಳೆದ ಹಲವಾರು ವರ್ಷಗಳಿಂದ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆ ಕೋಡಿ ಒಡೆದು ಇಷ್ಟೆಲ್ಲಾ ಅವಾಂತರ ಸೃಷ್ಟಿಯಾಗಿ ಬಡಾವಣೆಗಳು ಜಲಾವೃತಗೊಂಡು ಜನರು ನರಕಯಾತನೆ ಅನುಭವಿಸಿದರೂ ಬಿಬಿಎಂಪಿ ಶಾಶ್ವತ ಪರಿಹಾರ ಕಲ್ಪಿಸಲು ಮುಂದಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಪರಿಹಾರ ಹಣವನ್ನು ಆರ್‍ಟಿಜಿಎಸ್ ಮಾಡಲು ಸುಮಾರು ಇನ್ನೂರು ಸಂತ್ರಸ್ತರ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದು ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎನ್ನುತ್ತಾರೆ ಹೇರೋಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ವರುಣ್‍ಕುಮಾರ್.

Facebook Comments