ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಎತ್ತಂಗಡಿ..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.6- ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಅವರನ್ನು ವರ್ಗಾವಣೆಯಾಗುವ ಸಾಧ್ಯತೆಯಿದೆ. ಬಿಬಿಎಂಪಿ ಆಯುಕ್ತರಾಗಿ ಅನಿಲ್‍ಕುಮಾರ್ ಅವರು ವರ್ಗಾವಣೆಯಾಗಿ ಇನ್ನು ಒಂದು ವರ್ಷ ತುಂಬಿಲ್ಲ. ಆಗಲೇ ಅವರನ್ನು ಸರ್ಕಾರ ವರ್ಗಾವಣೆ ಮಾಡಲು ಮುಂದಾಗಿದೆ.

ಉಪಚುನಾವಣೆಯ ಫಲಿತಾಂಶದ ನಂತರ ಅನಿಲ್‍ಕುಮಾರ್ ಅವರನ್ನು ವರ್ಗಾಣೆ ಮಾಡಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ನೇಮಿಸುವ ಸಾಧ್ಯತೆ ಇದೆ. ಬಿಬಿಎಂಪಿಯಲ್ಲಿ ಅನಿಲ್‍ಕುಮಾರ್ ಅವರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿಲ್ಲ.

ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಬಿಬಿಎಂಪಿಯಲ್ಲಿ ದಕ್ಷವಾಗಿ ಕಾರ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸಲು ನಿರಾಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಅನಿಲ್‍ಕುಮಾರ್ ಅವರನ್ನು ಸರ್ಕಾರ ಸದ್ಯದಲ್ಲೇ ಎತ್ತಂಗಡಿ ಮಾಡಲಿದೆ.

Facebook Comments

Sri Raghav

Admin