ಬ್ರೇಕಿಂಗ್ : ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ದಿಢೀರ್ ಎತ್ತಂಗಡಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.13- ಬಿಬಿಎಂಪಿಯ ಆಯುಕ್ತರಾಗಿದ್ದ ಅನಿಲ್‍ಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ನೇಮಿಸಲಾಗಿದೆ.

ಕಳೆದ ಆರು ತಿಂಗಳ ಹಿಂದಷ್ಟೇ ಅನಿಲ್‍ಕುಮಾರ ಅವರನ್ನು ರಾಜ್ಯ ಸರ್ಕಾರ ಬಿಬಿಎಂಪಿಗೆ ಆಯುಕ್ತರನ್ನಾಗಿ ನೇಮಿಸಿತ್ತು. ಅವರ ಅಧಿಕಾರಾವಧಿಯಲ್ಲಿ ನ್ಯಾಯಾಲಯದಲ್ಲಿ ಸಾಕಷ್ಟು ಮುಜುಗರವಾಗುವಂತಹ ಪ್ರಕರಣಗಳು ನಡೆದಿದ್ದವು. ಬಹಳಷ್ಟು ಪ್ರಕರಣಗಳಲ್ಲಿ ನ್ಯಾಯಾಲಯ ಬಿಬಿಎಂಪಿಗೆ ಛೀಮಾರಿ ಹಾಕಿತ್ತು.

ಜೊತೆಗೆ ಅನಿಲ್‍ಕುಮಾರ್ ಅವರು ಜನಸಾಮಾನ್ಯರ ಕೈಗೆ ಸಿಗುವುದಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಎತ್ತಂಗಡಿ ಮಾಡಿರುವುದಾಗಿ ಹೇಳಲಾಗುತ್ತಿದೆ.
ಪ್ರಸ್ತುತ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಗೌರವ್ ಗುಪ್ತ ಅವರನ್ನು ಬಿಬಿಎಂಪಿಗೆ ನೂತನ ಆಯುಕ್ತರನ್ನಾಗಿ ನೇಮಿಸಲಾಗಿದೆ. ಗೌರವ್ ಗುಪ್ತ ಅವರು ಈ ಮೊದಲು ಬಿಬಿಎಂಪಿಯ ವಿಶೇಷ ಆಯುಕ್ತರಾಗಿ ಕೆಲಸ ಮಾಡಿದ್ದಾರೆ.

Facebook Comments

Sri Raghav

Admin