ಕೊರೊನಾ ನಿಯಮ ಮೀರಿದರೆ ಕಟ್ಟುನಿಟ್ಟಿನ ಕ್ರಮ : ಗೌರವ್‍ಗುಪ್ತಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.21-ಲಾಕ್‍ಡೌನ್ ಅನ್‍ಲಾಕ್ ಆಗಿದೆ ಎಂದು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಸಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಗ ತಾನೆ ಕೊರೊನಾ ಎರಡನೆ ಅಲೆಯಿಂದ ಚೇತರಿಸಿಕೊಳ್ಳುತ್ತಿದ್ದೇವೆ. ಜನ ಮತ್ತೆ ಮೈಮರೆತರೆ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಯಾರು ನಿಯಮ ಉಲ್ಲಂಘನೆ ಮಾಡಬಾರದು ಎಂದು ಮನವಿ ಮಾಡಿಕೊಂಡರು.

ಮಾಸ್ಕ್ ಹಾಕಿಲ್ಲದವರ ಪರಿಶೀಲನೆಗೆ ಮಾರ್ಷಲ್‍ಗಳು, ಪೊಲೀಸರು ಹಾಗೂ ಹೋಂ ಗಾಡ್ರ್ಸ್‍ಗಳಿಗೆ ವಿಶೇಷ ಅಧಿಕಾರ ನೀಡಿದ್ದೇವೆ. ಮಾಸ್ಕ್ ಧರಿಸದಿದ್ದರೆ ಅವರು ಭಾರಿ ಪ್ರಮಾಣದ ದಂಡ ವಿಧಿಸುವ ಸಾಧ್ಯತೆ ಇರುವುದರಿಂದ ಮಾಸ್ಕ್ ಧರಿಸುವುದನ್ನು ಮರೆಯಬಾರದು ಎಂದು ಕೇಳಿಕೊಂಡರು.

ತಮ್ಮ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವವರು ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಆಯಾ ವ್ಯಾಪಾರಿ ಸಂಸ್ಥೆಗಳೆ ನೋಡಿಕೊಳ್ಳಬೇಕು. ಒಂದು ವೇಳೆ ನಿಯಮ ಮೀರಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಹಂತಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದೆ.ಮೂರನೆ ಅನ್‍ಲಾಕ್ ಸಂದರ್ಭದಲ್ಲಿ ಕಲ್ಯಾಣ ಮಂಟಪಗಳು, ಮಾಲ್‍ಗಳು ಮತ್ತು ಮಾರ್ಕೆಟ್‍ಗಳನ್ನು ಒಪನ್ ಮಾಡಲು ಅವಕಾಶ ನೀಡುವ ಬಗ್ಗೆ ಚಿಂತಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅದೇ ರೀತಿ ಲಾಕ್‍ಡೌನ್ ಸಂದರ್ಭದಲ್ಲಿ ನಗರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

Facebook Comments

Sri Raghav

Admin