ಬೆಡ್ ನೀಡಲು ನಿರಾಕರಿಸಿದ 46 ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.10-ಕೊರೊನಾ ಸೋಂಕಿತರ ದಾಖಲಾತಿಗೆ ಮತ್ತು ಬೆಡ್ ನೀಡಲು ನಿರಾಕರಿಸಿರುವ ನಗರದ 46 ಆಸ್ಪತ್ರೆಗಳಿಗೆ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಶೇ.50ರಷ್ಟು ಬೆಡ್ ಮೀಸಲಾತಿ ಇಡಬೇಕು ಎಂದು ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದ್ದರೂ ಕೆಲ ಆಸ್ಪತ್ರೆಗಳ ಸಿಬ್ಬಂದಿಗಳು ಸೋಂಕಿಕಿತರೊಂದಿಗೆ ಅಮಾನವೀಯವಾಗಿ ನಡೆದುಕೊಂಡ ಬಗ್ಗೆ ವರದಿಯಾಗಿತ್ತು.

ಕೆಲ ಆಸ್ಪತ್ರೆಗಳು ಬೆಡ್ ನೀಡಲು ನಿರಾಕರಿಸಿದರೆ ಇನ್ನೂ ಕೆಲ ಆಸ್ಪತ್ರೆಯವರು ಸಾರ್ವಜನಿಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಿದ್ದರು ಹಾಗೂ ಬಿಬಿಎಂಪಿ ಅಧಿಕಾರಿಗಳ ಮಾತಿಗೂ ಕ್ಯಾರೆ ಎನ್ನುತ್ತಿರಲಿಲ್ಲ.

ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಅವರು ಸಾರ್ವಜನಿಕರೊಂದಿಗೆ ಅಮಾನವೀಯವಾಗಿ ವರ್ತಿಸಿರುವ 46 ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

Facebook Comments