ಬಿಬಿಎಂಪಿಯಲ್ಲಿ 4000 ಪೌರ ಕಾರ್ಮಿಕ ಹುದ್ದೆಗಳ ನೇಮಕಾತಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ 4000 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಸೆಪ್ಟೆಂಬರ್ 09, 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. ಅಕ್ಟೋಬರ್ 09, 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಗ್ರೂಪ್‌ಡಿ ವೃಂದದ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಜ್ಞಾನದ ಬಗ್ಗೆ ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು.  18 ರಿಂದ 45 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/- ಶುಲ್ಕ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಅಕ್ಟೋಬರ್ 09 ರಂದು 11-45 ಗಂಟೆಯೊಳಗೆ ಆನ್‌ಲೈನ್‌ಮೂಲಕ, ಡೆಬಿಟ್‌ಕಾರ್ಡ್‌, ಕ್ರೆಡಿಟ್ ಕಾರ್ಡ್, ನೆಟ್‌ಬ್ಯಾಂಕಿಂಗ್ ಮೂಲಕವು ಪಾವತಿಸಬಹುದು.

#ಆಯ್ಕೆ ವಿಧಾನ ಹೇಗೆ?
ಈಗಾಗಲೇ ಎರಡು ವರ್ಷಗಳಿಗಿಂತ ಹೆಚ್ಚಿನ ಅವಧಿ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ನೇಮಕಾತಿ ಮಾಡಲು ಮೊದಲ ಆಧ್ಯತೆ ನೀಡಲಾಗುತ್ತದೆ.
ಅರ್ಜ ಸಲ್ಲಿಸಿದವರ ಪೈಕಿ ಹೆಚ್ಚು ವಯಸ್ಸಾದವರಿಗೆ ಉದ್ಯೋಗ ನೀಡಲು ಮೊದಲ ಆಧ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಪರಿಶೀಲಿಸಿ : https://bit.ly/2ZsEdDW

Facebook Comments