ಬಿಬಿಎಂಪಿ ಟ್ರಾಫಿಕ್ ಇಂಜಿನಿಯರಿಂಗ್ ಘಟಕ ಅವ್ಯವಹಾರ ಕುರಿತು ಎಸಿಬಿ ತನಿಖೆಗೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.14- ಕಳೆದ 2017-18 ಮತ್ತು 2018-19ನೇ ಸಾಲಿನ ಪಾಲಿಕೆಯ ಟ್ರಾಫಿಕ್ ಇಂಜಿನಿಯರಿಂಗ್ ಘಟಕದಲ್ಲಿ ನಿರ್ವಹಿಸಿರುವ 109 ಕೋಟಿ ಕಾಮಗಾರಿಗಳಲ್ಲಿ ನಡೆದಿರುವ 53 ಕೋಟಿ ರೂ.ಗೂ ಹೆಚ್ಚು ಅವ್ಯವಹಾರದ ಪ್ರಕರಣವನ್ನು ತನಿಖೆ ನಡೆಸುವಂತೆ ಎಸಿಬಿಗೆ ವಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.

ಬಿಜೆಪಿ ವಕ್ತಾರರಾದ ಎನ್.ಆರ್.ರಮೇಶ್ ಟಿಇಸಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಸಿಸಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಗಳು ಎಸಿಬಿಗೆ ಆದೇಶ ನೀಡಿದ್ದಾರೆ.

ಟ್ರಾಫಿಕ್ ಇಂಜಿನಿಯರಿಂಗ್ ಸೆಲ್ ಇಲಾಖೆಯು ತಾನು ನಿರ್ವಹಿಸಿರುವ 109 ಕೋಟಿ ಮೊತ್ತದ ಕಾಮಗಾರಿಗಳಲ್ಲಿ ಮಾಡದೆ ಇರುವ ಕಾಮಗಾರಿಗಳಿಗೆ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಗಳಿಗೆ ಅವಕಾಶ ಮಾಡಿಕೊಟ್ಟು, ಗುತ್ತಿಗೆದಾರರೊಂದಿಗೆ ಶಾಮೀಲಾಗಿ 53 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ವಂಚಿಸಿರುವ ಬಗ್ಗೆ ತನಿಖೆ ನಡೆಸುವಂತೆ ಕಳೆದ ಮಾರ್ಚ್ ತಿಂಗಳಲ್ಲಿ ಆಯುಕ್ತರು ಟಿವಿಸಿಸಿಗೆ ಆದೇಶಿಸಿದ್ದರು.

ಟಿವಿಸಿಸಿ ಇಲಾಖೆ ಅಧಿಕಾರಿಗಳು ಕಳೆದ ವಾರವಷ್ಟೇ ಈ ಹಗರಣದ ಸಂಬಂಧ 179 ಪುಟಗಳ ವರದಿಯನ್ನು ಆಯುಕ್ತರಿಗೆ ಸಲ್ಲಿಸಿದ್ದರು. ಇದರ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಎಸಿಬಿಗೆ ವಹಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin