‘ನಾನು ಪೊಲೀಸ್ ಅಧಿಕಾರಿಯಾಗಿದ್ದರಿಂದ ಗೃಹ ಖಾತೆ ಕೊಟ್ಟರೆ ಸೂಕ್ತ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.7- ಯಾವುದೇ ಖಾತೆಗೆ ಬೇಡಿಕೆ ಯನ್ನು ಇಟ್ಟಿಲ್ಲ. ಇನ್ನೊಬ್ಬರ ಖಾತೆಯನ್ನು ಕಿತ್ತುಕೊಡಿ ಎಂದು ಕೇಳಿಲ್ಲ ಎಂದು ನೂತನ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ತಮ್ಮ ಕುಟುಂಬದ ಸದಸ್ಯ ರೊಂದಿಗೆ ವಿಕಾಸಸೌಧದಲ್ಲಿ ಹಂಚಿಕೆಯಾಗಿ ರುವ ತಮ್ಮ ಕೊಠಡಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾವು ಪೊಲೀಸ್ ಅಧಿಕಾರಿಯಾಗಿದ್ದರಿಂದ ಗೃಹ ಖಾತೆ ಕೊಟ್ಟರೆ ಸೂಕ್ತ ಎಂದು ಮಾಧ್ಯಮದವರು ಬಿಂಬಿಸುತ್ತಿದ್ದಾರೆ ಅಷ್ಟೆ. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಖಾತೆ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಮಾಜಿ ಸಚಿವರಾದ ಎಚ್.ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ಸಂಪುಟಕ್ಕೆ ಸೇರ್ಪಡೆಯಾಗಲು ಸಾಧ್ಯವಾಗಲಿಲ್ಲ. ಜೂನ್‍ನಲ್ಲಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಬಿಜೆಪಿಗೆ ಬಂದ 17 ಮಂದಿಯೂ ಒಟ್ಟಾಗಿದ್ದೇವೆ ಎಂದರು.

ಸಚಿವ ರಮೇಶ್ ಜಾರಕಿಹೊಳಿ ನಮ್ಮ ನಾಯಕರಲ್ಲ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಳಿನ್‍ಕುಮಾರ್ ಕಟೀಲ್ ನಮ್ಮ ನಾಯಕರು ಎಂದು ಹೇಳಿದರು.

Facebook Comments