ಬಿಜೆಪಿ ಸರ್ಕಾರ ಸುಭದ್ರವಾಗಿದೆ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಬಿ.ಸಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ.29- ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮೂರು ವರ್ಷ ಬಿಜೆಪಿ ಸರ್ಕಾರ ಸುಭದ್ರ ವಾಗಿರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸರ್ಕಾರ ಸುಭದ್ರವಾಗಿದೆ.

ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿಯಾಗಿ ನೆರೆ , ಕೊರೊನಾದಂತಹ ಎಲ್ಲಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು.

ಇಷ್ಟು ದಿನ ಲಾಕ್ಡೌನ್ ಇದ್ದ ಕಾರಣ ಹೊಟೇಲ್‍ಗಳೆಲ್ಲ ಮುಚ್ಚಿವೆ.ಹೀಗಾಗಿ ಆತ್ಮೀಯರ ಮನೆಯಲ್ಲಿ ಔತಣಕ್ಕೆ ಸೇರಿದ್ದಾರೆ. ಇದು ಸಭೆ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವ ದಲ್ಲಿ ಎಲ್ಲರಿಗೂ ಚರ್ಚಿಸಲು ಅವಕಾಶವಿದೆ. ರಾಜ್ಯಸಭೆ-ವಿಧಾನ ಪರಿಷತ್ ಚುನಾವಣೆಗಳು ಬರುತ್ತಿರುವುದರಿಂದ ಈ ಬಗ್ಗೆ ಸಹಜವಾಗಿ ಚರ್ಚಿಸಿರ ಬಹುದಷ್ಟೆ ಎಂದರು.
ಯತ್ನಾಳ್ ಹೇಳಿಕೆ ಅವರ ವೈಯಕ್ತಿಕ.

ಆ ಬಗ್ಗೆ ತಾವು ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಹೇಳಿದರು.. ಕ್ಷೇತ್ರದ ಅಭಿವೃದ್ಧಿ ಬಗ್ಗೆ, ಜನರ ಕಷ್ಟನಷ್ಟದ ಬಗ್ಗೆ ಜನಪ್ರತಿನಿಧಿಗಳಾದವರಿಗೆ ಅವರ ಕುಟುಂಬಸ್ಥರು ಗಮನಕ್ಕೆ ತರಬಹುದು ಎಂದರು

Facebook Comments