ಡಿಸೆಂಬರ್ 9 ರಂದು ಖರ್ಗೆಗೆ ಸಿಹಿ ಸುದ್ದಿ ಸಿಕ್ಕಿದೆ : ಕುಟುಕಿದ ಕೌರವ

ಈ ಸುದ್ದಿಯನ್ನು ಶೇರ್ ಮಾಡಿ

ಹಿರೇಕೆರೂರು, ಡಿ.10-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿ.9 ರಂದು ರಾಜೀನಾಮೆ ಕೊಟ್ಟು ಮನೆಗೆ ಹೋಗುತ್ತಾರೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರಿಗೆ ಉಪಚುನಾವಣೆ ಫಲಿತಾಂಶ ತಿರುಗುಬಾಣವಾಗಿದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದರು.

ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಟ್ಟು ಮನೆಗೆ ಹೋಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಅವರೇ ರಾಜೀನಾಮೆ ಕೊಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಹೇಳಿದರು.

ಅವರು ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಕ್ರಮ. ಡಿ.9 ರಂದು ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದರು. ಸಿದ್ದು ರಾಜೀನಾಮೆಯಿಂದ ಅವರಿಗೆ ಖುಷಿಯಾಗಿರಬಹುದು ಎಂದು ತಿಳಿಸಿದರು. ಹಿರೇಕೆರೂರು ಕ್ಷೇತ್ರಕ್ಕೆ ಮಂತ್ರಿಗಿರಿ ಸಿಕ್ಕಿರಲಿಲ್ಲ. ಈಗ ಮಂತ್ರಿಗಿರಿ ಸಿಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

Facebook Comments