ಫೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಆದ್ಯತೆ ನೀಡಲು ವಿಶ್ವನಾಥ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.27- ನಗರದ ಸಂಚಾರ ದಟ್ಟಣೆ ನಿವಾರಣೆಗೆ ರೂಪಿಸಲಾಗಿರುವ ಪೆರಿಫರೆಲ್ ವರ್ತುಲ ರಸ್ತೆಯ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಧ್ಯಕ್ಷರಾಗಿ ಅಕಾರ ವಹಿಸಿಕೊಂಡ ನಂತರ ಇಂದು ಮೊದಲ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ಪೆರಿಫರೆಲ್ ವರ್ತುಲ ರಸ್ತೆಗೆ ಆರ್ಥಿಕ ನೆರವು ನೀಡಲು ಜಾಗತಿಕ ಮಟ್ಟದ ಮೂರು ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ಬಿಡಿಎ ಆಯುಕ್ತರಾದ ಡಾ.ಎಚï.ರ್ಆ.ಮಹದೇವ ಅವರು ಅಧ್ಯಕ್ಷರ ಗಮನಕ್ಕೆ ತಂದರು. ಈ ವೇಳೆ ಮಾತನಾಡಿದ ಅಧ್ಯಕ್ಷರು ವರ್ತುಲ ರಸ್ತೆ ನಿರ್ಮಾಣ ಕಾರ್ಯ ಜರೂರಾಗಿ ಆರಂಭವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಬೇಕಾಗಿರುವ ಎಲ್ಲಾ ಅನುಮತಿಗಳನ್ನು ಪಡೆದು ಯೋಜನೆಗೆ ಚಾಲನೆ ನೀಡಬೇಕೆಂದು ಸೂಚಿಸಿದರು.

ನಗರದಲ್ಲಿ ಬಿಡಿಎಗೆ ಸೇರಿದ ಎಲ್ಲಾನಿವೇಶನಗಳು ಮತ್ತು ಇತರೆ ಆಸ್ತಿಗಳನ್ನು ಕೂಡಲೇ ಗುರುತಿಸಿ ಅವುಗಳ ವಿವರಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಬಡಾವಣೆಗಳಲ್ಲಿ ಕಿರು ಅರಣ್ಯ ಬೆಳೆಸಲು ಸೂಚನೆ ನೀಡಿದ ಅವರು, ಇದಕ್ಕಾಗಿ ಅರಣ್ಯ ಇಲಾಖೆ ಸಹಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಫೆರಿಪರಲ್ ವರ್ತುಲ ರಸ್ತೆಯು ಸುಮಾರು 65 ಕಿಲೋಮೀರ್ಟ ಉದ್ದದ ಯೋಜನೆಯಾಗಿದೆ. ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆವರೆಗೆ 18.40 ಕಿ.ಮೀ, ಬಳ್ಳಾರಿ ರಸ್ತೆಯಿಂದ ಹಳೆ ಮದ್ರಾಸ್ ರಸ್ತೆವರೆಗೆ 17.95 ಕಿಮೀ ಮತ್ತು ಹಳೆ ಮದ್ರಾಸ್ ರಸ್ತೆಯಿಂದ ಹೊಸೂರು ರಸ್ತೆವರೆಗೆ 28.80 ಕಿಲೋಮೀರ್ಟ ಉದ್ದ.

Facebook Comments