8ನೇ ತರಗತಿ, ಐಟಿಐ, ಪದವಿ ಮಾಡಿದವರಿಗೆ ಉದ್ಯೋಗಾವಕಾಶ, ಬಿಇಸಿಐಎಲ್‌ನಲ್ಲಿ 2684 ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ (ಬಿಇಸಿಐಎಲ್) ಖಾಲಿ ಇರುವ 2684 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 25-07-2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ (ಬಿಇಸಿಐಎಲ್) ಯಲ್ಲಿ ಖಾಲಿ ಇರುವ ನುರಿತ ಮಾನವಶಕ್ತಿ, ಅನ್-ಸ್ಕಿಲ್ಡ್ ಮ್ಯಾನ್‌ಪವರ್, ಕನ್ಸಲ್ಟೆಂಟ್ & ಅಕೌಂಟ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ 8 ನೇ ತರಗತಿ ಪಾಸ್, ಐಟಿಐ, ಬಿ.ಟೆಕ್, ಬಿ.ಕಾಂ, ಎಂ.ಕಾಂ, ಎಂಬಿಎ ಅಥವಾ ಸಮಾನತೆಯ ಶೈಕ್ಷಣಿಕ ಅರ್ಹತೆ ಪೂರೈಸಿದ ಅರ್ಜಿದಾರರು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.  18 ರಿಂದ 45 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ: ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಗೆ ಭೇಟಿನೀಡಿ: www.becil.com

ಅಧಿಸೂಚನೆ ಗಮನಿಸಿ: 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ