ಬೆಡ್ ಹಂಚಿಕೆ ಹಗರಣ : 17 ಹೊರಗುತ್ತಿಗೆ ಸಿಬ್ಬಂದಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ.5-ಕೊರೊನಾ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಬಿಬಿಎಂಪಿ ದಕ್ಷಿಣ ವಲಯ ವಾರ್ ರೂಮ್‍ನ 17 ಹೊರಗುತ್ತಿಗೆ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ವಾರ್ ರೂಮ್‍ನಲ್ಲಿ ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದ 17 ಹೊರ ಗುತ್ತಿಗೆ ಸಿಬ್ಬಂದಿಗಳು ಹಣ ನೀಡಿದವರಿಗೆ ಹಾಸಿಗೆ ಹಂಚಿಕೆ ಮಾಡುತ್ತಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ ಹಾಗೂ ರವಿ ಸುಬ್ರಮಣ್ಯ ಅವರು ಗಂಭೀರ ಆರೋಪ ಮಾಡಿದ್ದರು.

ಸಂಸದರ ಆರೋಪದ ಬೆನ್ನಲ್ಲೆ 17 ಸಿಬ್ಬಂದಿಗಳನ್ನು ಬಿಬಿಎಂಪಿ ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿಗಳು ನಡೆಸಿದ ಅವ್ಯವಹಾರದ ಹಿಂದೆ ಯಾರಿದ್ದಾರೆ.

ಸೋಂಕಿತರ ಆಸ್ಪತ್ರೆ ದಾಖಲಾತಿಗೆ ಹಣ ಪಡೆದವರು ಯಾರು ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

Facebook Comments

Sri Raghav

Admin