ಬೆಮೆಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.21- ತುಮಕೂರು ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬೆಮೆಲ್ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ತುಮಕೂರು ಕ್ಷೇತ್ರದಿಂದ ಕಾಂತರಾಜು ಜೆಡಿಎಸ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂತರಾಜು ಜೆಡಿಎಸ್ನಿಂದ ದೂರು ಉಳಿದಿದ್ದರು. ಅವರಿಗೆ ಜೆಡಿಎಸ್ ಟಿಕೆಟ್ ಕೂಡ ನಿರಾಕರಿಸಿತ್ತು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ತೋರಿಸಿದ ಕಾಂತರಾಜು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಬದಲಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಅವರ ಪರವಾಗಿ ಕೆಲಸ ಮಾಡಿದ್ದರು. ತುಮಕೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಕಾಂತರಾಜು ಅವರು ತುರುವೇಕೆರೆ ಅಥವಾ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೇ ಕಾರಣಕ್ಕೆ ಅವರು ಜೆಡಿಎಸ್ನಿಂದ ದೂರು ಉಳಿದಿದ್ದರು. ಕಾಂಗ್ರೆಸ್ನಿಂದ ಈ ಎರಡು ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳ ಕೊರತೆ ಇದೆ. ಹೀಗಾಗಿ ಕಾಂತರಾಜು ಅವರ ಸೇರ್ಪಡೆ ಪಕ್ಷಕ್ಕೆ ಹೊಸ ಬಲ ನೀಡಿದೆ ಎಂದು ಮುಖಂಡರು ವಿಶ್ಲೇಷಿಸಿದ್ದಾರೆ.

ಕಾಂತರಾಜು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ ಕೋವಿಡ್ ಕಾರಣದಿಂದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಬರಬಾರದು ಎಂದು ನಿರ್ಬಂಸಲಾಗಿತ್ತು.

Facebook Comments

Sri Raghav

Admin