ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಹೈಅಲರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮಾ.22- ನೆರೆಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಕೇಸ್ ಪತ್ತೆಯಾದ ಪ್ರದೇಶಗಳಲ್ಲಿ ತೀವ್ರ ನಿಗಾ ಇಡಲಾಗುತ್ತಿದೆ ಎಂದು ಡಿಸಿ ಎಂ.ಜಿ.ಹಿರೇಮಠ ತಿಳಿಸಿ ದ್ದಾರೆ. ಮೂರಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾದ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತನೆ ಮಾಡಲಾಗುತ್ತದೆ. ಈಗಾಗಲೇ ಬೆಳಗಾವಿಯ ಎರಡು ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಸ್ಥಾಪನೆ ಮಾಡಲಾಗಿದೆ ಎಂದು ಡಿಸಿ ಎಂ.ಜಿ.ಹಿರೇಮಠ ತಿಳಿಸಿ ದ್ದಾರೆ.

ಸೋಂಕಿತರ ಮನೆಯ 50 ಮೀಟರ್ ವ್ಯಾಪ್ತಿ ಪ್ರದೇಶ ಮೈಕ್ರೋ ಕಂಟೈನ್ಮೆಂಟ್ ಝೋನ್ ಎಂದು ಘೊಷಣೆ ಮಾಡಲಾಗಿದೆ. ಕೊರೊನಾ ಪ್ರಕರಣಗಳು ಪತ್ತೆಯಾಗಿರುವ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಬೆಳಗಾವಿ ಸದಾಶಿವ ನಗರದ ಒಂದೆ ಮನೆಯಲ್ಲಿ 7 ಕೋವಿಡ್ ಕೇಸ್ ಪಾಸಿಟಿವ್ ಬಂದಿದೆ. ಅದಕ್ಕಾಗಿ ಆ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಆ ಮನೆಯ ಅಕ್ಕಪಕ್ಕದ 10 ಮನೆಯನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ.

ಬೆಳಗಾವಿ ವಿಭಾಗ ಮತ್ತು ಚಿಕ್ಕೋಡಿ ವಿಭಾಗದಲ್ಲಿ ಈಗಾಗಲೇ 14 ಚೇಕ್ ಫೋಸ್ಟ್ ಮಾಡಲಾಗಿದೆ. ಚೆಕ್ ಫೋಸ್ಟ್ ಬಳಿ ಎಲ್ಲಾ ಫೋಲೀಸ್ ಹೆಲ್ತ್ ವರ್ಕರ್ಸ್ ದಿನದ 24 ಗಂಟೆ ಕೆಲಸ ಮಾಡುತ್ತಿ ದ್ದಾರೆ ಎಂದು ಹೇಳಿದರು.

Facebook Comments