ಬೇಸಿಗೆಯಲ್ಲಿ ದಿನಕ್ಕೊಂದು ಗ್ಲಾಸ್ ಲೆಮನ್ ಜ್ಯೂಸ್ ಕುಡಿಯೋದ್ರಿನ ಏನು ಲಾಭ ಗೊತ್ತೇ..!

ಈ ಸುದ್ದಿಯನ್ನು ಶೇರ್ ಮಾಡಿ

ಬೇಸಿಗೆಯಲ್ಲಿ ಆರೋಗ್ಯ ನಿರ್ವಹಣೆಗೆ ಹೆಚ್ಚು ಅನುಕೂಲಕಾರಿ ದ್ರವಾಹಾರ ನಿಂಬುಪಾನಿ. ವಿಟಮಿನ್ ಸಿ ಯಿಂದ ಭರಿತವಾದಂತಹ ಈ ಪದಾರ್ಥವನ್ನು ಸೇವಿಸಿದ ನಂತರದಲ್ಲಿ ಒಮ್ಮೆಲೇ ಶಕ್ತಿ ಪ್ರವಹಿಸುತ್ತದೆ. ದೇಹಕ್ಕೆ, ಮನಸ್ಸಿಗೆ ಸಮಾಧಾನ ಎನಿಸುತ್ತದೆ.

ಬೇಸಿಗೆಯಲ್ಲಿ ದೇಹವು ಬೆವರಿನಿಂದಾಗಿ ದುರ್ವಾಸನೆಯನ್ನು ಬೀರಬಹುದು. ನಿಂಬೆನೀರಿನ ಆಂಟಿ ಬಯೋಟಿಕ್ ಹಾಗೂ ಡಿಸ್ಇನ್ಪೆಕ್ಟಂಟ್ ಗುಣಗಳು ಸೋಂಕುಗಳಿಂದ ರಕ್ಷಿಸಲು, ಬೆವರಿನ ದುರ್ವಾಸನೆಯನ್ನು ಕಡಿಮೆ ಮಾಡಲು ಸಹಕರಿಸುತ್ತದೆ

ಈ ಪಾನೀಯಕ್ಕೆ ಭರಪೂರ ಸಕ್ಕರೆ ಸುರಿದು ರುಚಿಯನ್ನು ಹೆಚ್ಚಿಸಿಕೊಂಡು ಕುಡಿಯುತ್ತೇವೆ. ಇದರ ಬದಲಾಗಿ ಸಾವಯವ ಬೆಲ್ಲವನ್ನು ಬಳಸಬಹುದಾಗಿದೆ. ಇದಕ್ಕೆ ಕಾಳುಮೆಣಸಿನ ಪುಡಿ ಹಾಕಿ ಕುಡಿಯುವುದರಿಂದ ಚೆನ್ನಾಗಿ ರುಚಿಯೂ ಬರುತ್ತದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದ ಸಾಕಷ್ಟು ಪ್ರಯೋಜನಗಳು ನಮ್ಮದಾಗುತ್ತದೆ. ಬೇಸಿಗೆಯಲ್ಲಿ ಈ ಪಾನೀಯದ ಸೇವನೆಯು ಹೆಚ್ಚು ಪ್ರಯೋಜನಕಾರಿ.

ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ. ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು. ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ. ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ. ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ. ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

Facebook Comments