ಭಾಸ್ಕರ್ ರಾವ್ ಸೇರಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.31-ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ‌ ಆದೇಶಿಸಿದೆ.

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ  ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ.ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ  ಆರ್ಥಿಕ ಅಪರಾಧಗಳು ಮತ್ತು ಅಪರಾಧ ತನಿಖಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಬಿ.ದಯಾನಂದ ಅವರನ್ನು ಕಮಲ್ ಪಂತ್‌ ಅವರ ವರ್ಗಾವಣೆಯಿಂದ ತೆರವಾದ  ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

Facebook Comments

Sri Raghav

Admin