ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‍ಅವರಿಗೂ ಕೊರೊನಾ ಆತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.3- ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‍ಅವರಿಗೂ ಕೊರೊನಾ ಆತಂಕ ಎದುರಾಗಿದೆ. ಏಕೆಂದರೆ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದ ಕಮಲ್ ಪಂಥ್, ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಸತತ ಸಂಪರ್ಕದಲ್ಲಿದ್ದರು.

ಕಳೆದ ವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕಮಲ್‍ಪಂಥ್ ನಿರಂತರವಾಗಿ ಸಿಎಂ ಜೊತೆ ಮಾತುಕತೆ ನಡೆಸಿದ್ದರು.

ಗುಪ್ತಚರ ವಿಭಾಗದ ಮುಖ್ಯಸ್ಥರಾದ ಕಾರಣ ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಂದಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಬೇಕಿತ್ತು. ಹೀಗಾಗಿ ಕಮಲ್ ಪಂಥ್ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಗರ ಪೊಲೀಸ್ ಆಯುಕ್ತರಾದ ನಂತರವೂ ಅವರು ಮುಖ್ಯಮಂತ್ರಿಗೆ ಶುಭ ಕೋರಲು ಕಾವೇರಿ ನಿವಾಸಕ್ಕೆ ತೆರಳಿದ್ದರು. ಇದೀಗ ಸ್ವತಃ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಕಮಲ್ ಪಂಥ್‍ಗೂ ಭೀತಿ ಎದುರಾಗಿದೆ.

Facebook Comments

Sri Raghav

Admin