ಬೆಂಗಳೂರಿಗರೇ ಹುಷಾರ್, ಕುಂಟುನೆಪ ಹೇಳಿ ರಸ್ತೆಗಿಳಿದರೆ ಬೀಳುತ್ತೆ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.15- ಕೊರೊನಾ ವೈರಸ್ ತಡೆಗಟ್ಟಲು ಎರಡನೇ ಹಂತದ ಲಾಕ್‍ಡೌನ್‍ಗೆ ಕರೆ ಕೊಟ್ಟ ಹಿನ್ನೆಲೆ ಇಂದಿನಿಂದ ಈ ಆದೇಶವನ್ನು ಮತ್ತಷ್ಟು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ನಿಯಂತ್ರಿಸಲು ಕೆಲವು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ಗೃಹ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಡಿದೆ.

ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಇಂದಿನಿಂದ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿ ಮಾಡಲು ಮುಂದಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಎರಡನೇ ಹಂತದ ನಗರದಲ್ಲಿ ಬೇಕಾಬಿಟ್ಟಿ ಓಡಾಡುವುದು,ಮುಂಜಾನೆ ವಾಕಿಂಗ್ ನೆಪದಲ್ಲಿ ನಾಯಿ ಹಿಡಿದು ಸುತ್ತಾಡಿ ಒಂದು ಏರಿಯಾದಿಂದ ಇನ್ನೊಂದು ಏರಿಯಾಗೆ ಹೋಗಿ ಬರೋವುದು ಹೀಗೆ ನಾನಾ ವಿಚಾರದಲ್ಲಿ ಸಾರ್ವಜನಿಕರನ್ನು ನಿಯಂತ್ರಣ ಮಾಡಲು ಪೊಲೀಸರು ಸರ್ವ ರೀತಿಯಲ್ಲೂ ಸಿದ್ಧರಾಗಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರನ್ನು ಕಂಟ್ರೋಲ್ ಮಾಡೋಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕಳೆದ 20 ದಿನಗಳಿಂದ ಲಾಕ್‍ಡೌನ್ ಜಾರಿಯಲ್ಲಿದ್ದರೂ ಜನರು ಮಾತ್ರ ಚಿಕ್ಕಪುಟ್ಟ ಕಾರಣಗಳನ್ನು ಹೇಳಿಕೊಂಡು ಓಡಾಡುತ್ತಿದ್ದರು.

ಪೊಲೀಸರು ಇದ್ದರೂ ಕೂಡ ವಾಕಿಂಗ್ ಮಾಡೋ ನೆಪದಲ್ಲಿ ಕೆಲವರು ಹೊರಗೆ ಬಂದರೆ, ಇನ್ನು ಕೆಲವರು ನಾಯಿ ಜೊತೆಗೆ ವಾಕಿಂಗ್ ಬರುತ್ತಿದ್ದಾರೆ. ಪೊಲೀಸರು ಪ್ರಶ್ನೆ ಮಾಡಿದರೆ ನಾಯಿ ವಾಕಿಂಗ್ ಸರ್ ಎಂದು ಡ್ರಾಮಾ ಮಾಡುತ್ತಿರುವುದು ಹೆಚ್ಚಾಗಿದ್ದು, ಪೊಲೀಸರು ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ವಾಯು ವಿಹಾರ ಮಾಡುವವರು ಮನೆಯಲ್ಲಿ ಮಾಡಬೇಕು. ನಾಯಿ ಇದ್ದರೂ ಕೂಡ ಮನೆಯ ಅಕ್ಕ-ಪಕ್ಕದಲ್ಲೇ ವಾಕಿಂಗ್ ಮಾಡಿಸಬೇಕು ಎಂದು ಪೊಲೀಸರು ಸೂಚನೆ ಕೊಟ್ಟಿದ್ದಾರೆ.ಸೂಕ್ತ ಬಂದೋಬಸ್ತ್ ಮಾಡಲಾಗಿದ್ದು, ಅನವಶ್ಯಕವಾಗಿ ರೋಡಿಗೆ ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಸರು ಹೇಳಲು ಇಚ್ಛಸದ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲದೇ, ರಾಜ್ಯದ ಗಡಿಪ್ರದೇಶಗಳಲ್ಲಿ ಸಿಸಿಟಿವಿ ಹಾಕಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಏ.20ರ ವರೆಗೆ ಬಿಗಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಈ ವರೆಗೂ 1.80 ಲಕ್ಷ ಪಾಸ್ ನೀಡಲಾಗಿದೆ. ಎಲ್ಲಾ ಪಾಸ್‍ಗಳು ಏ.20ರ ವರೆಗೂ ಮುಂದುವರಿಯುತ್ತೆ.

ತುರ್ತು ಪಾಸ್ ಬೇಕಾದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸೂಕ್ತ ದಾಖಲೆ ಕೊಟ್ಟು ಹೊಸ ಪಾಸ್ ಪಡೆಯಬಹುದು. ನಕಲಿ ಪಾಸ್ ಪಡೆದು ಸಿಕ್ಕಿ ಬಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಅಗತ್ಯ ವಸ್ತುಗಳ ಸರಬರಾಜು ಮಾಡಲು ಅವಕಾಶ ಇದೆ. ಬೆಂಗಳೂರನಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಜಪ್ತಿ ಮಾಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ತಿಳಿಸಿದ್ದಾರೆ.

ಮಾಹಿತಿ ಪ್ರಕಾರ 3 ಲಕ್ಷ ವಾಹನಗಳು ಸಂಚರಿಸಿವೆ. ಪಾಸ್‍ಗಳನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರು ಅನಗತ್ಯವಾಗಿ ಓಡಾಡುತ್ತಿದ್ದಾರೆ ಎನ್ನಲಾಗಿದೆ. ಇಂತವರನ್ನು ಪತ್ತೆ ಹಚ್ಚಿ ವಾಹನ ಜಪ್ತಿ ಮಾಡಿ ಕೇಸ್ ದಾಖಲಿಸಲಿ ಸೂಚನೆ ನೀಡಲಾಗಿದೆ. ಸಿಲಿಕಾನ್ ಸಿಟಿ ಸಂಪೂರ್ಣ ಖಾಕಿ ಕಣ್ಗಾವಲಿನಲ್ಲಿದೆ ಎಂದಿದ್ದಾರೆ.

ಮತ್ತೊಂದೆಡೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಕೂಡ ಟ್ವೀಟ್ ಮೂಲಕ ಎಚ್ಚರಿಕೆಯ ಸಂದೇಶ ತಿಳಿಸಿದ್ದಾರೆ. ಈಗಾಗಲೇ ಕೊಟ್ಟಿರುವ ಪಾಸ್‍ಗಳು ಏ.20 ರವರೆಗೂ ಮುಂದುವರೆಯುತ್ತೆ.ಆದರೆ, ಲಾಕ್ ಡೌನ್ ಹಾಗೂ ಸೀಲï ಡೌನ್ ಸಿಲಿಕಾನ್ ಸಿಟಿಯಲ್ಲಿ ತುಂಬಾ ಕಠಿಣವಾಗಿರಲಿದೆ.

ಇಷ್ಟು ದಿನ ಸಹಕರಿಸಿದ್ದಕ್ಕೆ ಧನ್ಯವಾದ ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಮುಂದಿನ ದಿನದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಹೇಮಂತ್ ನಿಂಬಾಳ್ಕರ್ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

Facebook Comments

Sri Raghav

Admin