ಬೆಳ್ಳಂಬೆಳಿಗ್ಗೆ ರೌಡಿಗಳ ಬೆವರಿಳಿಸಿದ ಡಿಸಿಪಿ ರವಿ ಚನ್ನಣ್ಣನವರ್ & ಟೀಮ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.10- ಕುಖ್ಯಾತ ರೌಡಿ ಲಕ್ಷ್ಮಣ್ ನಡುರಸ್ತೆಯಲ್ಲೇ ಭೀಕರವಾಗಿ ಕೊಲೆಯಾದ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ವಿಭಾಗದ ಪೊಲೀಸರು ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ 150ಕ್ಕೂ ಹೆಚ್ಚು ರೌಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇಂದು ಮುಂಜಾನೆ 4ಗಂಟೆಯಿಂದ ಆರಂಭವಾದ ಈ ಅನಿರೀಕ್ಷಿತ ದಾಳಿ ಬೆಳಗ್ಗೆ 11 ಗಂಟೆವರೆಗೂ ನಡೆಯಿತು. ಈ ಸಂದರ್ಭದಲ್ಲಿ ರೌಡಿಗಳಿಂದ ಮಾರಕಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಮನೆಗಳಿಂದ ರೌಡಿಗಳನ್ನು ಠಾಣೆಗಳಿಗೆ ಕರೆತಂದ ಪೊಲೀಸರು, ಅವರುಗಳು ಈಗ ಮಾಡುತ್ತಿರುವ ವೃತ್ತಿ, ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಮತ್ತು ಮೊಬೈಲ್ ನಂಬರ್‍ಗಳನ್ನು ಪಡೆದುಕೊಂಡರು.

ಲೋಕಸಭಾ ಚುನಾವಣೆ ಬರುತ್ತಿದೆ ಈ ಸಂದರ್ಭದಲ್ಲಿ ಯಾವುದೇ ರೀತಿಯ ರೌಡಿ ಚಟುವಟಿಕೆಗಳಲ್ಲಿ ತೊಡಗಬಾರದು ಹಾಗೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಅವರುಗಳಿಗೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ಸಹ ನೀಡಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ವಿಭಾಗದ ಎಸಿಪಿಗಳು, ಎಲ್ಲಾ ಠಾಣೆ ಇನ್‍ಸ್ಪೆಕ್ಟರ್‍ಗಳು ಮತ್ತು ಸಿಬ್ಬಂದಿ ವರ್ಗದವರು ಈ ದಾಳಿಯಲ್ಲಿ ಭಾಗವಹಿಸಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin