ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ. 27- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದ ಶಂಕುಸ್ಥಾಪನೆ ಹಾಗೂ ಒಣಕಸ ಸಂಗ್ರಹಣೆಗಾಗಿ ಬಕೆಟ್ ವಿತರಣೆ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷೆ ಮುನಿರತ್ನಮ್ಮ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಟಿ.ಎ.ರವಿಕುಮಾರ್, ಟಿ.ಜಿ.ಮಂಜುನಾಥ್, ವೀಣಾ ಲೋಕೇಶ್, ರೇಣುಕಾ ವೆಂಕಟೇಶ್, ಬಿ.ಆರ್.ಲಕ್ಷ್ಮೀಶ್, ವೇಣುಗೋಪಾಲ್.ಆರ್, ತಿಮ್ಮಕ್ಕ ಮುನಿಯಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮುರುಡಯ್ಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೌಮ್ಯ.ಸಿ.ಜಿ. ಸೇರಿದಂತೆ ವಿ.ಎಸ್.ಎಸ್.ಎನ್. ನಿರ್ದೇಶಕರುಗಳು ಮತ್ತಿತ್ತರರಿದ್ದರು.

Facebook Comments

Sri Raghav

Admin