ಮತ್ತೆ ಬೆಳ್ಳಿತೆರೆ ಮೇಲೆ ಬರುತ್ತಿದೆ `ಭಾಗ್ಯವಂತರು’ ಚಿತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಡಾ.ರಾಜ್‍ಕುಮಾರ್ ಅಭಿನಯದ ಭಾಗ್ಯವಂತರು ಚಿತ್ರವನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡುವ ಭಾಗ್ಯ ಕನ್ನಡ ಸಿನಿರಸಿಕರಿಗೆ ಸಿಗಲಿದೆ. ಇದೇ ನವೆಂಬರ್‍ನಲ್ಲಿ ಅನೇಕ ನವೀನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ ಚಿತ್ರವನ್ನು ಮತ್ತೆ ತೆರೆಗೆ ತರುತ್ತಿದ್ದಾರೆ.

ನನ್ನ ಮೊದಲ ನಿರ್ದೇಶನದ ಚಿತ್ರ ಭಾಗ್ಯವಂತರು. ದ್ವಾರಕೀಶ್ ಈ ಚಿತ್ರದ ನಿರ್ಮಾಪಕರು. ನಾನು ಆಗಲೇ ರಾಹ್‍ಕುಮಾರ್ ಅವರು ನಟಿಸಿದ್ದ ಬಬ್ರುವಾಹನ, ನಾ ನಿನ್ನ ಮರೆಯಲಾರೆ, ಜಗ ಮೆಚ್ಚಿದ ಮಗ ಸೇರಿದಂತೆ ಅನೇಕ ಚಿತ್ರಗಳಿಗೆ ಸಹ ನಿರ್ದೇಶನ ಮಾಡಿದ್ದ. ಹಾಗಾಗಿ ರಾಜ್ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ . ನನಗೂ ಅವರೆಂದರೆ ಅಷ್ಟೇ ಪ್ರೀತಿ. ನಿರ್ಮಾಪಕ ದ್ವಾರಕೀಶ್ ಹಾಗೂ ರಾಜಕುಮಾರ್ ಇಬ್ಬರೂ ನೀವೆ ಈ ಚಿತ್ರ ನಿರ್ದೇಶನ ಮಾಡಿ ಎಂದರು.

ಆಗ 44ವರ್ಷಗಳ ಹಿಂದೆ ನಾನು ಭಾಗ್ಯವಂತರು ಚಿತ್ರವನ್ನು ನಿರ್ದೇಶಿಸಿದ್ದ. ನನ್ನ ಮೊದಲ ನಿರ್ದೇಶನದ ಚಿತ್ರವೇ ಸೂಪರ್ ಹಿಟ್ ಆಯಿತು. ಈಗ ಮುನಿರಾಜು ನೂತನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು ಹಿರಿಯ ನಿರ್ದೇಶಕ ಭಾರ್ಗವ.

ನಾನು ಅಪ್ಪಟ ಅಣ್ಣಾವ್ರ ಅಭಿಮಾನಿ. ರಾಜ್‍ಕುಮಾರ್ ಎಂದರೆ ನನ್ನ ಪ್ರಾಣ. ನನ್ನ ಚಿತ್ರರಂಗದೊಂದಿಗಿನ ನಂಟು 1978ನೇ ಇಸವಿಯಿಂದ ಇದೆ. ಹದಿನೆಂಟು ವರ್ಷಗಳ ಕಾಲ ವಜ್ರೇಶ್ವರಿ ಸಂಸ್ಥೆಯಲ್ಲಿ ಕೆಲಸ ಮಾಡಿದ್ದೇನೆ. ಪಾರ್ವತಮ್ಮ ರಾಜ್‍ಕುಮಾರ್ ಅವರೆ ನನ್ನನ್ನು ಮೊದಲು ಚಿತ್ರಮಂದಿರದ ಆರ್‍ಪಿಯಾಗಿ ನೇಮಕ ಮಾಡಿ ಯಳಂದೂರಿಗೆ ಕಳುಹಿಸಿದ್ದರು.

ನಾನು ಮೊದಲು ಮರು ಬಿಡುಗಡೆ ಮಾಡಿದ ಚಿತ್ರ ಆಪರೇಷನ್ ಡೈಮಂಡ್ ರಾಕೆಟ್, ನಂತರ ನಾನೊಬ್ಬ ಕಳ್ಳ ಹೀಗೆ ರಾಜ್‍ಕುಮಾರ್ ಅವರ ನಾಲ್ಕೈದು ಚಿತ್ರಗಳನ್ನು ಮರು ಬಿಡುಗಡೆ ಮಾಡಿದ್ದೇನೆ. ಈಗ ಭಾಗ್ಯವಂತರು ಚಿತ್ರವನ್ನು ಸುಮಾರು 150ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇನೆ, ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮುನಿರಾಜು.

Facebook Comments