ಭಾರತ್ ಬಂದ್ : ಡಿಸಿಪಿಗಳಿಗೆ ಭದ್ರತೆ ಹೊಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.25- ಭಾರತ್ ಬಂದ್ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತೆ ಕೈಗೊಳ್ಳಬೇಕೆಂದು ನಗರದ ಎಲ್ಲಾ ವಿಭಾಗದ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರು ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಸಿ ರೈತ ಸಂಘಟನೆಗಳು ಇದೇ ಸೋಮವಾರ ಭಾರತ್ ಬಂದ್‍ಗೆ ಕರೆ ನೀಡಿವೆ.

ಮುಂಜಾಗ್ರತಾ ಕ್ರಮವಾಗಿ ಆಯಾಯ ವಿಭಾಗದ ಡಿಸಿಪಿಗಳು ಸೂಕ್ತ ಬಂದೋಬಸ್ತ್ ಮಾಡಿಕೊಳ್ಳ ಬೇಕು, ಬಂದ್ ಸಂದರ್ಭದಲ್ಲಿ ನಗರಕ್ಕೆ ಹೊರಗಿನಿಂದ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಸೂಕ್ತ ಭದ್ರತೆ ಕೈಗೊಳ್ಳಬೇಕೆಂದು ಆಯುಕ್ತರು ಸೂಚಿಸಿದ್ದಾರೆ. ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳು, ಸಣ್ಣಪುಟ್ಟ ಘಟನೆಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ಗಸ್ತು ಹೆಚ್ಚಳ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಬೇಕೆಂದು ಕಮಲ್‍ಪಂಥ್ ಆದೇಶಿಸಿದ್ದಾರೆ.

ವರದಿ ಸಲ್ಲಿಸಲು ಸೂಚನೆ:
ನ್ಯೂತರಗಪೇಟೆಯಲ್ಲಿ ಗೋದಾಮಿ ನಲ್ಲಿ ಸೋಟ ಸಂಭವಿಸಿ ಮೂವರು ಮೃತಪಟ್ಟು, ಮೂವರು ತೀವ್ರ ಗಾಯಗೊಂಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯುಕ್ತರು, ನಗರದಲ್ಲಿರುವ ಎಲ್ಲ ಪಟಾಕಿ ಅಂಗಡಿಗಳು ಹಾಗೂ ಗೋದಾಮುಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಿದ್ದಾರೆ.

ತಪಾಸಣೆ ಕೈಗೊಳ್ಳಿ:
ಪ್ರತಿ ಠಾಣಾ ವ್ಯಾಪ್ತಿಗಳಲ್ಲಿ ಪಟಾಕಿ ಅಂಗಡಿಗಳು ಹಾಗೂ ಗೋದಾಮುಗಳನ್ನು ತಪಾಸಣೆ ನಡೆಸಿ ವ್ಯಾಪಾರಿಗಳು ಸುರಕ್ಷತಾ ನಿಯಮಗಳು ಅನುಸರಿಸಿದ್ದಾರೆಯೇ, ಪಟಾಕಿ ಸಂಗ್ರಹ, ಮಾರಾಟಕ್ಕೆ ಅನುಮತಿ ಪಡೆದಿದ್ದಾರೆಯೇ ಎಂಬುದನ್ನ ಪರಿಶೀಲಿಸಬೇಕು ಎಂದು ಆಯುಕ್ತರು ಹೇಳಿದ್ದಾರೆ.

ಕ್ರಮ ಜರುಗಿಸಿ:
ಕಾನೂನುಬಾಹಿರವಾಗಿ ಗೋದಾಮುಗಳಲ್ಲಿ , ಅಂಗಡಿಗಳಲ್ಲಿ ಪಟಾಕಿ ಸಂಗ್ರಹಿಸಿರುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಆಯುಕ್ತರು ಆಯಾ ವಿಭಾಗದ ಡಿಸಿಪಿಗಳಿಗೆ ನಿರ್ದೇಶಿಸಿದ್ದಾರೆ.

ವಾರದೊಳಗೆ ವರದಿ ಸಲ್ಲಿಸಿ:
ಒಂದು ವಾರದೊಳಗೆ ನಗರದ ಎಲ್ಲ ಪಟಾಕಿ ಅಂಗಡಿಗಳು ಹಾಗೂ ಪಟಾಕಿ ಗೋದಾಮುಗಳ ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅಕಾರಿಗಳೇ ಹೊಣೆ:
ಎನ್.ಟಿ.ಪೇಟೆಯಂತಹ ದುರಂತ ಮತ್ತೆ ಮರುಕಳಿಸಿದರೆ ಅದಕ್ಕೆ ಸಂಬಂಧಪಟ್ಟ ಅಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಆಯುಕ್ತರಾದ ಕಮಲ್‍ಪಂಥ್ ಅವರು ಎಚ್ಚರಿಸಿದ್ದಾರೆ.

Facebook Comments