ವಿಷ್ಣು ಸ್ಮಾರಕ ಕುರಿತು ಸಿಎಂ ಜೊತೆ ಭಾರತಿ ವಿಷ್ಣುವರ್ಧನ್ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-Bharati-Vishnuv

ಬೆಂಗಳೂರು, ಜೂ.5- ಮೈಸೂರಿನಲ್ಲಿ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಸಂಬಂಧ ಇಂದು ನಟಿ ಭಾರತಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿ ವಿಷ್ಣುವರ್ಧನ್ ಸ್ಮಾರಕ ಕುರಿತು ಭಾರತಿ ಮಾತುಕತೆ ನಡೆಸಿದರು.  ಬೆಂಗಳೂರಿನಲ್ಲಿ ಮೀಸಲಿಟ್ಟ ಜಾಗ ನ್ಯಾಯಾಲಯದ ಮೆಟ್ಟಿಲೇರಿದೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದರೆ ಒಳಿತಾಗಲಿದೆ ಎಂದು ಭಾರತಿ ಅವರು ಗಮನ ಸೆಳೆದರು.  ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ, ಮತ್ತಿತರ ಕಾರ್ಯಗಳು ಇರುವುದರಿಂದ ಒಂದು ವಾರದ ನಂತರ ಇತ್ತ ಗಮನ ಹರಿಸುವುದಾಗಿ ಭರವಸೆ ನೀಡಿದರು.

Facebook Comments

Sri Raghav

Admin