ಕಲಾಸಿಪಾಳ್ಯ ಠಾಣೆಗೆ ಆಯುಕ್ತ ಭಾಸ್ಕರ್ ರಾವ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.9- ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಗಿದ್ದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಆರಂಭವಾಗಿದ್ದು, ಇಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಭೇಟಿ ನೀಡಿ ಸಿಬ್ಬಂದಿಗೆ ಧೈರ್ಯ ತುಂಬಿದರು.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ಸೀಲ್‍ಡೌನ್ ಮಾಡಲಾಗಿದ್ದ ಕಲಾಸಿಪಾಳ್ಯ ಠಾಣೆ ಇದೀಗ ತೆರೆಯಲಾಗಿದೆ. ಕೊರೊನಾ ಪಾಸಿಟಿವ್ ಬಂದಿರುವ ಪೊಲೀಸ್ ಸಿಬ್ಬಂದಿಗಳು ಗುಣಮುಖರಾಗುತ್ತಿದ್ದಾರೆ. ಯಾರೂ ಧೈರ್ಯಗೆಡಬೇಡಿ. ನಿಮ್ಮ ಜತೆ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಇದೆ ಎಂದು ಅಭಯ ನೀಡಿದರು.

ಕರ್ತವ್ಯದ ವೇಳೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ. ಕಡ್ಡಾಯವಾಗಿ ಮಸ್ಕ್, ಗ್ಲೌಸ್ ಧರಿಸಿ ಎಂದು ಠಾಣೆಯ ಸಿಬ್ಬಂದಿಗಳಿಗೆ ಭಾಸ್ಕರ್‍ರಾವ್ ಧೈರ್ಯ ತುಂಬಿದರು. ಈ ಠಾಣೆಯ 24 ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರಲ್ಲಿ 23 ಮಂದಿ ಗುಣಮುಖರಾಗಿ ತೆರಳಿದ್ದಾರೆ. ಒಬ್ಬರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments