ಹಾಸನ ಜಿ.ಪಂ.ಸ್ಥಾಯಿ ಸಮಿತಿ ಚುನಾವಣೆ ; ಭವಾನಿ ರೇವಣ್ಣ ಪುನರಾಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಸೆ.9- ಜಿಪಂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಭವಾನಿರೇವಣ್ಣ ಪುನರಾಯ್ಕೆಗೊಂಡರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿಪಂ ಮಾಜಿ ಉಪಾಧ್ಯಕ್ಷ ರಾಗಿದ್ದ ಬಿಳಿ ಚೌಡಯ್ಯ ಆಯ್ಕೆಯಾದರೆ.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಾಲಗಾಮೆ ಕ್ಷೇತ್ರದ ಶಾರದಮ್ಮ ಶಿವಣ್ಣ ಅವರು ಆಯ್ಕೆಯಾಗಿದ್ದಾರೆ. ಎಲ್ಲಾ ಸ್ಥಾಯಿ ಸಮಿತಿ ಸ್ಥಾನಗಳಿಗೆ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಚುನಾವಣಾ ಪ್ರಕ್ರಿಯೆ ಇಂದು ಮುಕ್ತಾಯಗೊಂಡಂತಾಗಿದೆ.

ಜಿಲ್ಲಾ ಪಂಚಾಯ್ತಿಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿಲ್ಲ ಎಂದು ಹಲವು ದಿನಗಳಿಂದ ಜಿಲ್ಲಾಪಂಚಾಯಿತಿ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದ್ದರು. ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸಹ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದರು ಇದೀಗ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು ವಿವಾದ ಸುಖಾಂತ್ಯ ಕಂಡಿದೆ.

ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಕಾರಿಯಾಗಿ ಕಾರ್ಯನಿರ್ವಹಿಸಿದ ಜಿಲ್ಲಾಪಂಚಾಯತ್ ಮುಖ್ಯ ಯೋಜನಾಕಾರಿ ನಾಗರಾಜ್ ತಿಳಿಸಿದ್ದಾರೆ.

Facebook Comments