ಮುಂದಿನ 3 ಪಂದ್ಯಗಳಿಗೆ ವೇಗಿ ಭುವನೇಶ್ವರ್ ಕುಮಾರ್ ಅಲಭ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಮ್ಯಾಂಚೆಸ್ಟರ್, ಜೂ.17- ಮಂಡಿರಜ್ಜು ನೋವಿನಿಂದ ಬಳಲುತ್ತಿರುವ ಭಾರತದ ವೇಗಿ ಭುವನೇಶ್ವರ್‍ಕುಮಾರ್ ಅವರು ಮುಂದಿನ 3 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಗೆಲುವಿನ ಅಲೆಯಲ್ಲಿ ತೇಲುತ್ತಿರುವ ವಿರಾಟ್ ಕೊಹ್ಲಿ ಸಾರಥ್ಯದ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ ಕಾಡುತ್ತಿದ್ದು ಆಸ್ಟ್ರೇಲಿಯಾದ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್‍ಧವನ್ ಗಾಯಗೊಂಡು ಹೊರಗುಳಿದಿದ್ದರೆ, ನಿನ್ನೆ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವೇಗಿ ಭುವನೇಶ್ವರ್‍ಕುಮಾರ್ ಗಾಯಗೊಂಡಿದ್ದಾರೆ.

ಭುವನೇಶ್ವರ್‍ಕುಮಾರ್‍ಗೆ ಆಗಿರುವ ಗಾಯದ ಪ್ರಮಾಣ ಹೆಚ್ಚಾಗಿದ್ದರಿಂದ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿರುವುದರಿಂದ 2 ರಿಂದ 3 ಪಂದ್ಯಗಳಿಂದ ತಂಡದಿಂದ ಹೊರಗುಳಿಯಲಿದ್ದಾರೆ.

ಪ್ರಸ್ತುತ ವಿಶ್ವಕಪ್‍ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುವ ಮೂಲಕ 3 ಗೆಲುವು ಹಾಗೂ 1 ಟೈನಿಂದಾಗಿ 7 ಅಂಕಗಳನ್ನು ಪಡೆದು ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಿಕೊಂಡಿದ್ದಾರೆ.

ಭುವಿ ಬದಲು ಸಮಿ:
ಪಾಕಿಸ್ತಾನ ವಿರುದ್ಧದ ಭುವಿ ಮಾಡಿದ 3ನೆ ಓವರ್‍ನಲ್ಲಿ ಮಂಡಿರಜ್ಜಿಗೆ ಒಳಗಾಗಿರುವ ಭುವನೇಶ್ವರ್ ಬದಲು ಮತ್ತೊಬ್ಬ ವೇಗಿ ಮೊಹಮ್ಮದ್ ಸೆಮಿ ಆಡುವ 11ರ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆ.

ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಜಯ ಸಾಧಿಸಿರುವ ವಿರಾಟ್ ಕೊಹ್ಲಿ ಪಡೆಯು ಜೂನ್ 22 ರಂದು ಸೌಂತ್‍ಆಪ್ಟನ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಫ್ಘಾನಿಸ್ತಾನದ ಸವಾಲನ್ನು ಎದುರಿಸಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ