ಜಾತಿ, ಧರ್ಮದ ಆಧಾರದಲ್ಲಿ ಮತ ಯಾಚಿಸಕೂಡದು : ಸುಪ್ರೀಂ ಐತಿಹಾಸಿಕ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ,ಜ.2-ಚುನಾವಣೆಗಳಲ್ಲಿ ಧರ್ಮ, ಜಾತಿ ಆಧಾರದಲ್ಲಿ ಮತ ಯಾಚನೆ ಮಾಡಬಾರದು. ಮತಯಾಚನೆಯು ಜಾತ್ಯಾತೀತವಾಗಿರಬೇಕು ಎಂದು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸ್ಪಷ್ಟ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಜಾತ್ಯಾತೀತ ವಾದವನ್ನು ಎತ್ತಿಹಿಡಿದಿದೆ. ಸರ್ವೋಚ್ಛ ನ್ಯಾಯಾಲಯದಿಂದ ಈ ಐತಿಹಾಸಿಕ ತೀರ್ಪಿನಿಂದ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣಾ ಸಮರ ಭಾರಿ ಮಹತ್ವ ಪಡೆದುಕೊಂಡಂತಾಗಿದೆ.  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಇಂದು ಈ ಮಹತ್ವದ ತೀರ್ಪು ನೀಡಿದೆ. ಚುನಾವಣೆ ಎಂಬುದು ಜಾತ್ಯಾತೀತ ಪ್ರಕ್ರಿಯೆ. ಚುನಾವಣೆಗಳಲ್ಲಿ ಜಾತ್ಯಾತೀತ ವಾದ ಮುಂಚೂಣಿಯಲ್ಲಿರಬೇಕು. ಯಾವುದೇ ನಾಯಕರು ಜಾತಿಯನ್ನು ದುರ್ಬಳಕೆ ಮಾಡುವಂತಿಲ್ಲ ಎಂದು ಸಂವಿಧಾನಿಕ ಪೀಠ ಸ್ಪಷ್ಟವಾಗಿ ಹೇಳಿದೆ.

ಚುನಾವಣೆ ಸಂದರ್ಭಗಳಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಮತ ಯಾಚನೆ ಮಾಡಲಾಗುತ್ತಿದೆ. ಜಾತಿ ವ್ಯವಸ್ಥೆಯು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತು ಸಂವಿಧಾನಿಕ ಪೀಠ ವಿಚಾರಣೆ ನಡೆಸಿತು.  ವಿಚಾರಣೆ ಒಂದು ಹಂತದಲ್ಲಿ ಜಾತಿ ಆಧಾರಿತ ಮತಯಾಚನೆಗೆ ನಾಲ್ವರು ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದರು. ಇನ್ನುಳಿದ ಮೂವರು ನ್ಯಾಯಾಧೀಶರು ಜಾತಿ ಆಧಾರಿತ ಮತಯಾಚನೆ ಪರ ಒಲವು ಸೂಚಿಸಿದರು.  ಅಂತಿಮವಾಗಿ ಜಾತಿ, ಧರ್ಮ ಆಧಾರದಲ್ಲಿ ಮತ ಯಾಚಿಸಬಾರದೆಂಬ ಮಹತ್ವದ ನಿರ್ಣಯವನ್ನು ಪ್ರಕಟಿಸಲಾಯಿತು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin